ಧಾರವಾಡ: ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಅಮೃತ ದೇಸಾಯಿ ಶಂಕುಸ್ಥಾಪನೆ ನೆರವೇರಿಸಿದರು.
ತಾಲೂಕಿನ ತಡಕೋಡ ಗ್ರಾಮದಲ್ಲಿ ವಿವಿಧ ಕಾಮಗಾರಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉದ್ಘಾಟನಾ ಸಮಾರಂಭ ಸಹ ನೆರವೇರಿತು.
₹ 18 ಕೋಟಿ ವೆಚ್ಚದಲ್ಲಿ ಕೆ.ಎಸ್.ಎಸ್.ಡಿ.ಪಿ ಧಾರವಾಡ ತಾಲೂಕು ಗಡಿ ಭಾಗದಿಂದ ಜೀರಿಗೆವಾಡ ಕ್ರಾಸ್ವರೆಗೆ ರಸ್ತೆ, ₹80 ಲಕ್ಷ ವೆಚ್ಚದಲ್ಲಿ ತಡಕೋಡ ನವಗ್ರಾಮ ರಸ್ತೆ ನಿರ್ಮಾಣ ಹಾಗೂ ₹50 ಲಕ್ಷ ವೆಚ್ಚದಲ್ಲಿ ಸುತ್ತಮುತ್ತಲಿನ ಗ್ರಾಮಗಳ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನಡೆಯಿತು.
ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ತೀವ್ರ ಮುಜುಗರವಾಗಿದೆ. ಮೋದಿ ಆಡಳಿತದಲ್ಲಿ ಸೈನ್ಯಕ್ಕೆ ಹೆಚ್ಚಿನ ಬಲ ಬಂದಿದೆ. ಅಲ್ಲದೆ, ಭಾರತವೇ ವಿದ್ಯುತ್ ಉತ್ಪಾದಿಸಿ ಬೇರೆ ದೇಶಗಳಿಗೆ ನೀಡುವಂತಾಗಿದೆ ಎಂದು ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟರು.
ಶಾಸಕ ಅಮೃತ ದೇಸಾಯಿ ಮಾತನಾಡಿ, 17 ತಿಂಗಳ ಕಾಲ ವನವಾಸದಲ್ಲಿದ್ದೆವು. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಬಂದಿದೆ. ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುವುದಾಗಿ ಹೇಳಿದರು.