ಧಾರವಾಡ: ನೇರ ನೇಮಕಾತಿ ಹಾಗೂ ನೇರ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ಪ್ರತಿಭಟನೆ ಮೂರನೇ ದಿನಕ್ಕೆ ಅಂತ್ಯಗೊಂಡಿದೆ.
ಪೌರ ಕಾರ್ಮಿಕರು ಮೂರು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ ನೀಡಿ, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಮುಷ್ಕರ ಹಿಂಪಡೆದರು.
ಒಂದು ವಾರದೊಳಗಾಗಿ ಪೌರ ಕಾರ್ಮಿಕರಿಗೆ ನೇರ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳಿದ ಜಿಲ್ಲಾಧಿಕಾರಿ, ವೇತನ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.