ಧಾರವಾಡ: ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರು ಚಿಕಿತ್ಸೆ ಪಡೆಯುತ್ತಿರುವ ಎಸ್ಡಿಎಂ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ನಾಡಿನ ಹಿರಿಯ ಕವಿ ಚೆನ್ನವೀರ ಕಣವಿ ಅವರು ಇದೀಗ ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದರು.
ಆಸ್ಪತ್ರೆಯ ವೈದ್ಯರು ಕಣವಿಯವರ ಆರೋಗ್ಯದ ಬಗ್ಗೆ ಸಂಪೂರ್ಣ ನಿಗಾವಹಿಸಿದ್ದಾರೆ. ಹೀಗಾಗಿ, ಅವರು ಶೀಘ್ರ ಗುಣಮುಖರಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಣವಿ ಅವರು ಆದಷ್ಟು ಬೇಗ ಚೇತರಿಸಿಕೊಂಡು ಸಾರಸ್ವತ ಲೋಕದಲ್ಲಿ ಇನ್ನಷ್ಟು ಕಾರ್ಯ ಮಾಡಬೇಕಿದೆ. ನಾಡಿನ ಸಮಸ್ತ ಕನ್ನಡಿಗರ ಆಶಯದಂತೆ ಅವರು ಈ ಹಿಂದಿನಂತೆ ಗುಣಮುಖರಾಗಲಿದ್ದಾರೆಂದು ಮಾಜಿ ಸಚಿವರು ಆಶಯ ವ್ಯಕ್ತಪಡಿಸಿದರು.
ಇದನ್ನೂ ಓದಿರಿ: ಐಷಾರಾಮಿ ಜೀವನಕ್ಕಾಗಿ ಬೈಕ್ ಕಳ್ಳತನ ಮಾಡ್ತಿದ್ದ ನಾಲ್ವರ ಬಂಧನ, ಲಕ್ಷಾಂತರ ಮೌಲ್ಯದ ಬೈಕ್ ವಶ
ಈ ಸಂದರ್ಭದಲ್ಲಿ ಆಸ್ಪತ್ರೆಯ ಹಿರಿಯ ವೈದ್ಯರು ಕಣವಿ ಅವರಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ವಿವರಿಸಿದರು.