ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಕಾರ್ಪೊರೇಟರ್ ಸೇರಿದಂತೆ 154 ಆರೋಪಿಗಳಿಗೆ ಮೇ 13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ 4 ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಲಬುರ್ಗಿ ಸೆಂಟ್ರಲ್ ಜೈಲಿನಲ್ಲಿ 103 ಮಂದಿಯನ್ನು, ಬಳ್ಳಾರಿ ಜೈಲಿನಲ್ಲಿ 17 ಮಂದಿ ಹಾಗೂ ಮೈಸೂರು ಜೈಲಿನಲ್ಲಿ 10 ಮಂದಿಯನ್ನು ಮತ್ತು ಉಳಿದವರನ್ನು ಹುಬ್ಬಳ್ಳಿ ಹಾಗೂ ಧಾರವಾಡ ಸಬ್ ಜೈಲಿನಲ್ಲಿ ಇರಿಸಲಾಗಿದೆ.
ಈ ಹಿಂದೆ ಏ.30ರವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ಅವಧಿ ಮುಗಿದ ನಂತರ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಮೇ 13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಜಾಮೀನು ಅರ್ಜಿ ಸಲ್ಲಿಕೆ : ಬಂಧಿತರಲ್ಲಿ 20 ಜನರು ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ವಿದ್ಯಾಭ್ಯಾಸ, ಅನಾರೋಗ್ಯ ಸೇರಿದಂತೆ ಹಲವು ಅಂಶಗಳನ್ನು ಇಟ್ಟುಕೊಂಡು ಜಾಮೀನಿಗೆ ಅರ್ಜಿ ಹಾಕಿದ್ದು, ಪೊಲೀಸರು ಆಕ್ಷೇಪಣಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಓದಿ : ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಸಿಐಡಿಗೆ ಶರಣಾಗತಿ