ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ.
ಪಕ್ಕಿರಪ್ಪ ದ್ಯಾಮನ್ನವರ ( 60 ) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ಪಕ್ಕಿರಪ್ಪ ವಿವಿಧ ಖಾಸಗಿ ಬ್ಯಾಂಕ್ಗಳಲ್ಲಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಬ್ಯಾಂಕ್ಗಳಿಂದ ನೋಟಿಸ್ ಬಂದಿರುವ ಹಿನ್ನೆಲೆಯಲ್ಲಿ ಹೆದರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.