ಹುಬ್ಬಳ್ಳಿ: ನಕಲಿ ಐಡಿ ಕಾರ್ಡ್ ಬಳಸಿ ಸಂಚರಿಸುತ್ತಿದ್ದ ಸವಾರರ ಕಾರ್ ಹಾಗೂ ಬೈಕ್ಗಳನ್ನು ಸೀಜ್ ಮಾಡಿ, ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ಡಿಸಿಪಿ ಕೆ.ರಾಮರಾಜನ್ ತಿಳಿಸಿದರು.
ನಗರದಲ್ಲಿಂದು ಅನವಶ್ಯಕವಾಗಿ ಸಂಚರಿಸುತ್ತಿದ್ದ ವಾಹನ ತಪಾಸಣೆ ನಡೆಸಿ ನಂತರ ಮಾತನಾಡಿದ ಅವರು, ಅನವಶ್ಯಕವಾಗಿ ನಗರದಲ್ಲಿ ಸಂಚರಿಸುತ್ತಿದ್ದ 1,300 ವಾಹನಗಳನ್ನು ಜಪ್ತಿ ಮಾಡಲಾಗಿದೆ. ನಕಲಿ ಐಡಿ ಕಾರ್ಡ್ಗಳನ್ನಿಟ್ಟುಕೊಂಡು ನಗರದಲ್ಲಿ ಸಂಚರಿಸುತ್ತಿದ್ದವರ ಮೇಲೆ ಕೇಸ್ ಹಾಕಲಾಗಿದೆ ಎಂದರು.
ಬೇರೆ ಜಿಲ್ಲೆಗಳಲ್ಲಿ ನಡೆದ ಘಟನೆಯನ್ನು ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಹಾಗೂ ಕಸಬಾ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು. ಅವರು ತ್ರಿಬಲ್ ರೈಡಿಂಗ್ ಮಾಡುತ್ತಿದ್ದ ವೇಳೆ ಪೋಲಿಸರು ತಡೆಯಲು ಹೋದಾಗ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಆದ್ದರಿಂದ ಪೊಲೀಸರ ಮೇಲೆ ಬಂದ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದರು.