ಹುಬ್ಬಳ್ಳಿ: ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಧರಿಸುವುದನ್ನು ಸರ್ಕಾರ ಕಡ್ಡಾಯ ಮಾಡಿದೆ. ಆದರೂ ಕೆಲವರು ಬೇಜವಾಬ್ದಾರಿತನದಿಂದ ವರ್ತಿಸಿ ದಂಡ ತೆತ್ತುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇಂದು ಒಂದೇ ದಿನ ₹ 26,600 ದಂಡ ವಸೂಲಿ ಮಾಡಲಾಗಿದೆ.
ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 1976ರ ಕಲಂ 431ರ ಅನ್ವಯ ದಂಡ ಹಾಕಲಾಗುತ್ತಿದೆ. ಈವರೆಗೂ ಒಟ್ಟು
₹2,57,900 ದಂಡ ಸಂಗ್ರಹವಾಗಿದೆ ಎಂದು ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.