ETV Bharat / city

ಧಾರವಾಡ: ಕಾಟನ್​ ಮಿಲ್​ನಲ್ಲಿ ಭಾರಿ ಅಗ್ನಿ ಅವಘಡ- ಕೋಟ್ಯಂತರ ರೂ. ಮೌಲ್ಯದ ಹತ್ತಿ ಬೆಂಕಿಗಾಹುತಿ! - Dharwad fire accident

ರಾಜೇಶ್ ಕಾಟನ್ ಜಿನ್ನಿಂಗ್ ಮತ್ತು ಪ್ರೆಸಿಂಗ್ ಮಿಲ್‌ನಲ್ಲಿ ಅಗ್ನಿ ದುರಂತ ಸಂಭವಿಸಿದೆ.

fire accident on Dharwad cotton mill
ಕಾಟನ್​ ಮಿಲ್​ನಲ್ಲಿ ಭಾರಿ ಅಗ್ನಿ ಅವಘಡ
author img

By

Published : Mar 23, 2022, 10:20 AM IST

ಧಾರವಾಡ: ಧಾರವಾಡ ಬೇಲೂರು ಕೈಗಾರಿಕಾ ಪ್ರದೇಶದ ರಾಜೇಶ್ ಕಾಟನ್ ಜಿನ್ನಿಂಗ್ ಮತ್ತು ಪ್ರೆಸಿಂಗ್ ಮಿಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಹತ್ತಿ ಹಾಗೂ ಹಿಂಡಿ ಬೆಂಕಿಗಾಹುತಿಯಾಗಿದೆ.

ಕಾಟನ್​ ಮಿಲ್​ನಲ್ಲಿ ಭಾರಿ ಅಗ್ನಿ ಅವಘಡ

ಇದನ್ನೂ ಓದಿ: ಹಾವೇರಿ: ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿ ಧಗ ಧಗನೇ ಹೊತ್ತಿ ಉರಿಯಿತು ಮನೆ!

ರಾಜೇಶ್ ಕಾಟನ್ ಮಿಲ್‌ನಲ್ಲಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಧಾರವಾಡದ ಎರಡು ಅಗ್ನಿ ಶಾಮಕ ತಂಡ ಭೇಟಿ ನೀಡಿ ಬೆಂಕಿ ನಂದಿಸುವ ಕೆಲಸ‌ ಮಾಡಿದೆ. ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸಂಭವಿಸಬಹುದಾದಂತಹ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಗರಗ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.