ಧಾರವಾಡ: ಜಿಲ್ಲೆಯಲ್ಲಿ ಇಂದು 5 ವರ್ಷದ ಬಾಲಕ ಸೇರಿ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ.
ನೆಗಡಿ, ಕೆಮ್ಮು, ಜ್ವರದ ಲಕ್ಷಣಗಳು ಕಾಣಿಕೊಂಡ ಮೂವರು ಹಾಗೂ ಗುಜರಾತ್ನಿಂದ ಹಿಂದಿರುಗಿದ್ದ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 56 ವರ್ಷದ ಪುರುಷ (ಪಿ-7824), 5 ವರ್ಷದ ಬಾಲಕ (ಪಿ-7825), 28 ವರ್ಷದ ಪುರುಷ (ಪಿ-7826), 30 ವರ್ಷದ ಪುರುಷ (ಪಿ-7827) ಒಟ್ಟು ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಸೋಂಕಿತರಿಗೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.