ಹುಬ್ಬಳ್ಳಿ: ಫೇಸ್‌ಬುಕ್ ಮೂಲಕ ಪರಿಚಯವಾದ ವ್ಯಕ್ತಿಯೋರ್ವ ಧಾರವಾಡದ ರಾಮನಗರ ನಿವಾಸಿ ರಾಜಶೇಖರ ನವಲೂರ ಅವರಿಗೆ ಲಂಡನ್‌ನಿಂದ ಉಡುಗೊರೆ ಕಳುಹಿಸಿರುವುದಾಗಿ ನಂಬಿಸಿ, ಅವರಿಂದ 4.49 ರೂ. ಲಕ್ಷ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾನೆ.
ರಾಜಶೇಖರ ಅವರ ತಾಯಿಯ ಫೇಸ್‌ಬುಕ್ ಖಾತೆಯಿಂದ ಪರಿಚಯವಾದ ವ್ಯಕ್ತಿ, ಲಂಡನ್‌ನಿಂದ ಗಿಫ್ಟ್ ಬಂದಿದೆ ಎಂದು ನಂಬಿಸಿದ್ದಾನೆ. ವಿದೇಶಿ ಹಣ ಭಾರತದ ರೂಪಾಯಿಗೆ ಬದಲಾಯಿಸಲು, ತೆರಿಗೆ ಹಾಗೂ ಇತರೆ ಶುಲ್ಕವೆಂದು ಹಂತಹಂತವಾಗಿ ಬ್ಯಾಂಕ್ ಖಾತೆ, ಫೋನ್ ಪೇ ಮೂಲಕ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಪೋಷಕರೇ ಎಚ್ಚರ!.. ಚಾಕೋಲೆಟ್ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಯತ್ನ
ಈ ಸಂಬಂಧ ಹುಬ್ಬಳ್ಳಿಯ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.