ಹುಬ್ಬಳ್ಳಿ: ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ಬದುಕಿಸುವ ವೈದಕೀಯ ಸಿಬ್ಬಂದಿ ವಿವಿಧ ಬೇಡಿಕೆ ಈಡೇರಿಸುವಂತೆ ಹಗಲು ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಎದುರು ಕಳೆದೊಂದು ವಾರದಿಂದ ವೈದಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿ ಹೋರಾಟಕ್ಕೆ ಇಳಿದಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ 500ಕ್ಕೂ ಹೆಚ್ಚು ಸಿಬ್ಬಂದಿ ಹೋರಾಟ ಆರಂಭಿಸಿದ್ದು, ಸರ್ಕಾರದ ಗಮನ ಸೆಳೆಯಲು ವಿಭಿನ್ನ ಪ್ರತಿಭಟನೆಗಳನ್ನ ಮಾಡುತ್ತಿದ್ದಾರೆ. ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
2006ರ ನಂತರ ನೇಮಕವಾದ ವೈದಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಎನ್ಪಿಎಸ್, ಜ್ಯೋತಿ ಸಂಜೀವಿನಿ, ಮೂಲ ವೇತನ 50% ಹೆಚ್ಚುವರಿಯಾಗಿ ನೀಡುವಂತೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಆಗಿ ರೋಗಿಗಳ ಸೇವೆಗೆ ಯಾವುದೇ ಅಡ್ಡಿಯಾಗದಂತೆ ಹೋರಾಟ ಮಾಡುತ್ತಿದ್ದಾರೆ.
ಸರ್ಕಾರಿ ನೌಕರರಾಗಿ ನೇಮಕವಾದರೂ ತಮಗೆ ಉಳಿದೆಲ್ಲಾ ಸರ್ಕಾರಿ ನೌಕರರಿಗೆ ಸಿಗುವ ಪಿಂಚಣಿ, ಇನ್ಸೂರೆನ್ಸ್ ಸೇರಿದಂತೆ ಯಾವುದೇ ಸೌಲಭ್ಯ ಸಿಗ್ತಾಯಿಲ್ಲ ಎಂದು ಆರೋಪಿಸಿದ್ದಾರೆ.