ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ನವನಗರದ ಕರ್ನಾಟಕ ಸರ್ಕಲ್ನಲ್ಲಿ ಅನಿಲ ಸೋರಿಕೆಯಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿಸಿದ್ದಾರೆ.
ಮನೆಗೆ ಅಡುಗೆ ಅನಿಲ ಸರಬರಾಜು ಮಾಡುವ ಪೈಪ್ಲೈನ್ ಒಡೆದು ಅಡುಗೆ ಅನಿಲ ಸೋರಿಕೆಯಾಗಿದ್ದು, ಸಾರ್ವಜನಿಕರು ಆತಂಕಗೊಂಡಿದ್ದರು. ಅಲ್ಲದೇ ಭಾರೀ ಪ್ರಮಾಣದಲ್ಲಿ ಎದ್ದಿರುವ ಧೂಳಿನಿಂದ ಜನರು ಮತ್ತಷ್ಟು ಭಯಗೊಂಡಿದ್ದರು.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಅನಿಲ ಸೋರಿಕೆಯಾಗುವುದನ್ನ ನಿಲ್ಲಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಡುವಂತಾಯಿತು.