ಹುಬ್ಬಳ್ಳಿ : ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ. ಚುನಾವಣೆ ಒಳಗಾಗಿಯೇ ರಾಜ್ಯ ಸರ್ಕಾರ ಪಂಚಮಸಾಲಿ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಹಿನ್ನೆಲೆ ಇಂದು ಹುಬ್ಬಳ್ಳಿಯ ಚೆನ್ನಮ್ಮನ ಮೂರ್ತಿಗೆ ಸ್ವಾಮೀಜಿ ಮಾಲಾರ್ಪಣೆ ಮಾಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿಗಾಗಿ ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ ನಮ್ಮ ಅಭಿಯಾನ ನಡೆಯುತ್ತಿದೆ. ಶೀಘ್ರದಲ್ಲೇ ಸರ್ಕಾರ ವರದಿ ತರಿಸಿ ಮೀಸಲಾತಿ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಉತ್ತರ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು. ಕೇಂದ್ರ ಸರ್ಕಾರ ಸಹ ಚೆನ್ನಮ್ಮ ಜಯಂತಿಯನ್ನ ಘೋಷಣೆ ಮಾಡಬೇಕು ಎಂದು ಸ್ವಾಮೀಜಿ ಇದೇ ವೇಳೆ ಆಗ್ರಹಿಸಿದರು.
ಇದನ್ನೂ ಓದಿ: ಮೊದಲು ಸಮಿತಿಯ ವರದಿ ಪಡೆದು ಮೀಸಲಾತಿ ಬಗ್ಗೆ ಜನರಲ್ಲಿ ಭರವಸೆ ಮೂಡಿಸಬೇಕು: ಕೂಡಲಸಂಗಮ ಶ್ರೀ