ಹುಬ್ಬಳ್ಳಿ: ಇಲ್ಲೇ ಸುತ್ತಾಡಿಕೊಂಡು ಬರೋಣ ಬಾ ಎಂದು ಅಪ್ರಾಪ್ತೆ ಕರೆದುಕೊಂಡು ಹೋಗಿ, ಆಕೆಯ ಮೇಲೆಯೇ ಪ್ರಿಯಕರ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕಿನ ಗಿರಿಯಾಲ ಗ್ರಾಮದ ಶ್ರೀನಾಥ ನಾಗಣ್ಣವರ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ. 17 ವರ್ಷದ ಅಪ್ರಾಪ್ತೆಯನ್ನು ಈತ ಪ್ರೀತಿಸುತ್ತಿದ್ದ. ಆಕೆಯನ್ನು ಪುಸಲಾಯಿಸಿ ಜ. 10ರಂದು ಮಧ್ಯಾಹ್ನ ನೇಕಾರ ನಗರ ಸೇತುವೆ ಬಳಿಯಿಂದ ಕಲಘಟಗಿಗೆ ಕರೆದುಕೊಂಡು ಹೋಗಿದ್ದ. ನಂತರ ಕಲಘಟಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಆಕೆ ವಿರೋಧ ವ್ಯಕ್ತಪಡಿಸಿದರೂ ಒತ್ತಾಯಪೂರ್ವಕವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖೀಸಲಾಗಿದೆ.
ಈ ಸಂಬಂಧ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
(ಇದನ್ನೂ ಓದಿ: ಕೊರೊನಾ ಟೆಸ್ಟ್ಗೆ OK.. ನೋಟಿಸ್ಗೆ NO... ಡಿಕೆಶಿ ಮನೆಗೆ ನೋಟಿಸ್ ಅಂಟಿಸಿದ ಅಧಿಕಾರಿಗಳು)