ETV Bharat / city

ಹುಬ್ಬಳ್ಳಿ-ಹೈದರಾಬಾದ್ ವಿಮಾನ ಪಯಣಕ್ಕೆ ಹಸಿರು ನಿಶಾನೆ : ವಾರದಲ್ಲಿ ಮೂರು ದಿನ ಸಂಚಾರ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿ

ವಾರದಲ್ಲಿ ಮೂರು ದಿನ ಹುಬ್ಬಳ್ಳಿ-ಹೈದರಾಬಾದ್ ವಿಮಾನ ಸಂಚರಿಸಲಿದೆ. ಪ್ರಯಾಣಿಕರ ಸಂಖ್ಯೆ ಆಧರಿಸಿ ಮುಂದಿನ ದಿನಗಳಲ್ಲಿ ವಾರದ ಏಳು ದಿನವೂ ಸೇವೆ ವಿಸ್ತರಿಸಲಾಗುವುದು..

flight
flight
author img

By

Published : Mar 31, 2021, 3:31 PM IST

ಹುಬ್ಬಳ್ಳಿ: ಬಹು ನಿರೀಕ್ಷಿತ ಹುಬ್ಬಳ್ಳಿ- ಹೈದರಾಬಾದ್ ನೇರ ವಿಮಾನ ಸೇವೆಗೆ ಇಂದು ಚಾಲನೆ ನೀಡಲಾಯಿತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಅಲಾಯನ್ಸ್ ಏರ್‌ ಸಿಇಒ ಹರ್ಪ್ರೀತ್ ಎ ಡಿ ಸಿಂಗ್ ಮತ್ತು ಧಾರವಾಡ ಜಿಲ್ಲಾಧಿಕಾರಿ ಚಾಲನೆ ನೀಡಿದರು.

ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಹೈದರಾಬಾದ್ ನಗರಕ್ಕೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನಗಳ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ವಾರದಲ್ಲಿ ಮೂರು ದಿನ ಹೈದರಾಬಾದ್ ನಗರಕ್ಕೆ ವಿಮಾನ ಸಂಚರಿಸಲಿದೆ. ಪ್ರಯಾಣಿಕರ ಸಂಖ್ಯೆ ಆಧರಿಸಿ ಮುಂದಿನ ದಿನಗಳಲ್ಲಿ ವಾರದ ಏಳು ದಿನವೂ ಸೇವೆ ವಿಸ್ತರಿಸಲಾಗುವುದು. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿಯವರ ವಿಶೇಷ ಪ್ರಯತ್ನದಿಂದ ಹೈದರಾಬಾದ್ ನಗರಕ್ಕೆ ವಿಮಾನ ಯಾನ ಸೇವೆ ಆರಂಭವಾಗಿದೆ. ಅವರಿಗೆ ವಿಶೇಷ ಧನ್ಯವಾದಗಳು. ಹುಬ್ಬಳ್ಳಿ- ಮಂಗಳೂರು ನಡುವೆ ವಿಮಾನ ಸಂಪರ್ಕ ಕಲ್ಪಿಸಲು ಬೇಡಿಕೆ ಇದೆ. ಇದನ್ನು ಸಹ ಶೀಘ್ರ ಪ್ರಾರಂಭಿಸಲಾಗುವುದು ಎಂದರು.

ಹುಬ್ಬಳ್ಳಿಯಲ್ಲಿ ರಾತ್ರಿ ಸಹ ವಿಮಾನ ಇಳಿಯಲು ಅವಕಾಶವಿದೆ. ಸ್ವಯಂ ಚಾಲಿತ ಲ್ಯಾಂಡಿಗ್​ಗೆ ವ್ಯವಸ್ಥೆಯಿದೆ. ಈಗಿನ ರನ್ ವೇ ಟ್ರ್ಯಾಕ್ ವಿಸ್ತರಣೆ ಮಾಡಲಾಗುವುದು. ಮಧ್ಯ ಪ್ರಾಚ್ಯ ರಾಷ್ಟ್ರಗಳಿಗೆ ನೇರವಾಗಿ ವಿಮಾನ ಸೌಲಭ್ಯ ಕಲ್ಪಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಕಳುಹಿಸಲು ವಿಮಾನ ನಿಲ್ದಾಣ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ.

ಹುಬ್ಬಳ್ಳಿ-ಹೈದರಾಬಾದ್ ವಿಮಾನಕ್ಕೆ ಚಾಲನೆ

ರನ್ ವೇ ವಿಸ್ತರಿಸಿದ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನೇರವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಗಳು ಆರಂಭವಾಗಲಿವೆ. ಈಗಾಗಲೇ ಮುಂಬೈ, ಅಹಮದಾಬಾದ್, ಕೊಚ್ಚಿ, ಕೊಣ್ಣೂರ್, ಗೋವಾಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸಲಾಗಿದೆ. ಕೊರೊನಾ ನಂತರದ ಸ್ಥಿತಿ ಗತಿಗಳನ್ನು ನೋಡಿಕೊಂಡು ಇತರೆ ನಗರಗಳಿಗೂ ವಿಮಾನ ಸಂಪರ್ಕ ಕಲ್ಪಿಸಲಾಗುವುದು. ಟ್ರ್ಯೂ ಜೆಟ್ ಮಾಲೀಕರೊಂದಿಗೆ ಹೆಚ್ಚಿನ ವಿಮಾನ ಸಂಪರ್ಕ ಕಲ್ಪಿಸುವಂತೆ ಮಾತುಕತೆ ನಡೆಸಲಾಗಿದೆ ಎಂದರು.

green signal to hubli hyderabad flight
ಹುಬ್ಬಳ್ಳಿ-ಹೈದರಾಬಾದ್ ವಿಮಾನಕ್ಕೆ ಚಾಲನೆ

ಅಲಾಯನ್ಸ್ ಏರವೇಸ್​ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರ್ಪ್ರೀತ್ ಎ ಡಿ ಸಿಂಗ್ ಮಾತನಾಡಿ, ಏರ್ ಇಂಡಿಯಾ ಭಾರತೀಯರ ಹೃದಯ ಬೆಸೆಯುವ ಕಾರ್ಯ ಮಾಡುತ್ತಿದೆ. ಹುಬ್ಬಳ್ಳಿ ಮಹತ್ವದ ನಗರವಾಗಿದೆ. ವಿಮಾನಯಾನ ಸಂಪರ್ಕದ ಅವಶ್ಯಕತೆ ಇದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಮನವಿ ಮೇರೆಗೆ ಹೈದರಾಬಾದ್ ನಗರಕ್ಕೆ ವಿಮಾನಯಾನ ಸಂಪರ್ಕ ಕಲ್ಪಿಸಲಾಗಿದೆ.

green signal to hubli hyderabad flight
ಹುಬ್ಬಳ್ಳಿ-ಹೈದರಾಬಾದ್ ವಿಮಾನಕ್ಕೆ ಚಾಲನೆ

ಇದರಿಂದ ಕರ್ನಾಟಕ ಹಾಗೂ ತೆಲಂಗಾಣದ ಮಧ್ಯದ ಬಾಂಧವ್ಯ ವೃದ್ಧಿಯಾಗಲಿದೆ. ಅಲೈಯನ್ಸ್ ಏರ್‌ವೇಸ್ ಗೋರಖ್​ಪುರದಿಂದ ಲಖನೌ, ಬರೇಲಿಯಿಂದ ದೆಹಲಿ, ಬಿಲಾಸಪುರ್ ಜಬಲ್​ಪುರ್ ಹೀಗೆ ಹಲವು ನಗರಗಳಲ್ಲಿ ವಿಮಾನಯಾನ ಸೌಲಭ್ಯ ವಿಸ್ತರಿಸಿದೆ.‌ ದಕ್ಷಿಣ ಭಾರತದಲ್ಲಿ ಮೈಸೂರಿನಿಂದ ಮಂಗಳೂರು, ಕ್ಯಾಲಿಕಟ್, ಕಲಬುರ್ಗಿಯಿಂದ ಮುಂಬೈ ಹೀಗೆ ನಾನಾ ನಗರಗಳಿಗೆ ಸಂಪರ್ಕ ಕಲ್ಪಿಸಲಾಗಿದೆ.

green signal to hubli hyderabad flight
ಹುಬ್ಬಳ್ಳಿ-ಹೈದರಾಬಾದ್ ವಿಮಾನಕ್ಕೆ ಚಾಲನೆ

ಮೇಕ್ ಇನ್ ಇಂಡಿಯಾ ಯೋಜನೆಯಡಿ ಹೆಚ್​ಎಎಲ್​ನೊಂದಿಗೆ ನಾಗರಿಕ ಪ್ರಯಾಣಿಕ ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಈಶಾನ್ಯ ರಾಜ್ಯಗಳಲ್ಲಿ ವಿಮಾನಯಾನ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ ಕುಮಾರ್ ಠಾಕರೆ, ವಿಮಾನ ನಿಲ್ದಾಣ ಭದ್ರತಾಧಿಕಾರಿ ಜಗದೀಶ್ ಹಂಚಿನಾಳ್, ಏರ್ ಇಂಡಿಯಾ ಸಿಬ್ಬಂದಿ ನಾಗೇಂದ್ರ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.