ETV Bharat / city

ರಾಜ್ಯಸಭೆ ಚುನಾವಣೆಗಾಗಿ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿದ್ದೇನೆಂಬುದು ಸುಳ್ಳು : ಕುಮಾರಸ್ವಾಮಿ - ಜೆಡಿಎಸ್​ ಮೈತ್ರಿ

ನನ್ನ ಗುರಿ ಮುಂಬರುವ 2023ರ ವಿಧಾನಸಭೆ ಚುನಾವಣೆ. ಅದಕ್ಕಾಗಿ ಜಲಧಾರೆ ಮತ್ತು ಪಂಚರತ್ನ ರಥಯಾತ್ರೆಗೆ ಸಿದ್ಧತೆ ನಡೆಸಿದ್ದೇನೆ. ಇವೆರಡೂ ಕಾರ್ಯಕ್ರಮ ಬಳಸಿಕೊಂಡು ಮತದಾರರಿಗೆ ಮನವರಿಕೆ ಮಾಡುವ ಕೆಲಸ ಮಾಡಲಾಗುವುದು. ಈ 10 ತಿಂಗಳು ರಾಜ್ಯಾದ್ಯಂತ ಪ್ರವಾಸ ಮಾಡಿ 123 ಸೀಟ್ ಗೆಲ್ಲಲು ಶ್ರಮಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು..

H D Kumaraswamy talk about Rajya Sabha election
ಹೆಚ್.ಡಿ.ಕುಮಾರಸ್ವಾಮಿ
author img

By

Published : Jun 4, 2022, 5:26 PM IST

ಹುಬ್ಬಳ್ಳಿ : ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರು, ಸೋನಿಯಾಗಾಂಧಿಯವರಿಗೆ ಮಾತನಾಡಿದ್ದಾರೆಂಬ ವದಂತಿ ಶುದ್ದ ಸುಳ್ಳು. ನಾನು ಯಾವ ಕಾಂಗ್ರೆಸ್ ನಾಯಕರೊಂದಿಗೂ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಆಶಾವಾದ ಇರಬೇಕು. ಹಾಗಾಗಿ, ನಮ್ಮ ಪಕ್ಷದಿಂದ ರಾಜ್ಯಸಭೆಗೆ ಅಭ್ಯರ್ಥಿಗಳನ್ನು ನಿಲ್ಲಿಸಿದ್ದೇವೆ. ನಮ್ಮಲ್ಲಿ 32 ಮತಗಳಿವೆ. 3-4 ಜನರಲ್ಲಿ ಅಸಮಾಧಾನ ಇರುವುದು ನಿಜ. ಅವರನ್ನು ವಿಶ್ವಾಸಕ್ಕೆ ಪಡೆಯುವ ಕೆಲಸ ನಡೆಯುತ್ತಿದೆ ಎಂದರು.

ಬಿಜೆಪಿ ಬಿ ಟೀಮ್ 10ನೇ ತಾರೀಖಿನ ನಂತರ ಪ್ರಕಟ : ಈವರೆಗೆ ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ ಟೀಮ್ ಎಂದು ಆರೋಪಿಸಲಾಗುತ್ತಿತ್ತು. ಆದರೆ, ಬರುವ ರಾಜ್ಯಸಭೆಯ ಫಲಿತಾಂಶದ ನಂತರ ಯಾರು ಬಿಜೆಪಿಯ ಬಿ ಟೀಮ್ ಹಾಗೂ ನಾಯಕ ಯಾರೆಂದು ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.

ರಾಜ್ಯಸಭೆ ಚುನಾವಣೆಗಾಗಿ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿದ್ದೇನೆ ಎಂಬುದು ಸುಳ್ಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿರುವುದು..

ಯಾರು ಯಾರನ್ನು ಸೋಲಿಸಬೇಕೆಂಬುದು ಕಾಂಗ್ರೆಸ್ ಹಾಗೂ ಜೆಡಿಎಸ್​ಗೆ ಬಿಟ್ಟದ್ದು, ಆಗ ನಿಜವಾದ ವಾಸ್ತವ ನಾಡಿನ ಜನತೆಗೆ ಗೊತ್ತಾಗುತ್ತದೆ. ಗೆದ್ದರೇ ಶಕ್ತಿ ಹೆಚ್ಚಿಸಿಕೊಳ್ಳಲು ಅನುಕೂಲವಾಗುತ್ತದೆ. ಸೋತರೇ ಮತ್ತೊಂದು ರಾಜಕೀಯವಾಗಿ ಅಸ್ತ್ರವಾಗುತ್ತದೆ ಎಂದರು.

ನನ್ನ ಗುರಿ ಮುಂಬರುವ 2023ರ ವಿಧಾನಸಭೆ ಚುನಾವಣೆ, ಅದಕ್ಕಾಗಿ ಜಲಧಾರೆ ಮತ್ತು ಪಂಚರತ್ನ ರಥಯಾತ್ರೆಗೆ ಸಿದ್ದತೆ ನಡೆಸಿದ್ದೇನೆ. ಇವೆರಡೂ ಕಾರ್ಯಕ್ರಮ ಬಳಸಿಕೊಂಡು ಮತದಾರರಿಗೆ ಮನವರಿಕೆ ಮಾಡುವ ಕೆಲಸ ಮಾಡಲಾಗುವುದು. ಈ 10 ತಿಂಗಳು ರಾಜ್ಯಾದ್ಯಂತ ಪ್ರವಾಸ ಮಾಡಿ 123 ಸೀಟ್ ಗೆಲ್ಲಲು ಶ್ರಮಿಸುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಎರಡು ಶಿಕ್ಷಕರ ಕ್ಷೇತ್ರ ಗೆಲ್ಲುವ ವಿಶ್ವಾಸ : ಈಗಾಗಲೇ ರಾಜ್ಯದಲ್ಲಿ ಎರಡು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಎದುರಾಗಿದೆ. ಇದರಲ್ಲಿ ಎರಡು ಕ್ಷೇತ್ರಕ್ಕೂ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ನನ್ನ ಅಧಿಕಾರ ಅವಧಿಯಲ್ಲಿ ಶಿಕ್ಷಕರ ಕ್ಷೇತ್ರಕ್ಕೆ ಹಲವಾರು ಕೊಡುಗೆ ನೀಡಿದ್ದೇನೆ. ಈಗಿನ ಬಿಜೆಪಿ ಅಭ್ಯರ್ಥಿ ತನ್ನ ಸಾಧನೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ನಾನು ಮಾಡಿದ ಕಾರ್ಯ ಸ್ಪಲ್ಪವಾದರೂ ನೆನಪಿದ್ದರೇ ಮತ್ತೊಂದು ಬಾರಿ ನಮ್ಮ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕೆಂದು ಮನವಿ ಮಾಡಿದರು.

ಇದ್ನನೂ ಓದಿ: ನಮಗೆ ಚಡ್ಡಿಯೇ ಸಾಕಷ್ಟು ಕಲಿಸಿದೆ, ಆರ್​ಎಸ್​ಎಸ್​ ಟೀಕಿಸುವ ಸಿದ್ದರಾಮಯ್ಯಗೆ ಎಲ್ಲೂ ಚಿಕಿತ್ಸೆ ಇಲ್ಲ: ಕೆ.ಎಸ್. ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.