ETV Bharat / city

ಹಿಂದೂಯೇತರ ಅಂಗಡಿ ತೆರವು : ನಬೀಸಾಬ್ ಕುಟುಂಬಕ್ಕೆ ಮಾಜಿ ಸಿಎಂ ಹೆಚ್​ಡಿಕೆ ನೆರವು

author img

By

Published : Apr 10, 2022, 2:53 PM IST

ನೊಂದ ನಬೀಸಾಬ್ ಕುಟುಂಬಕ್ಕೆ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಆಸರೆಯಾಗಿದ್ದಾರೆ..

HD  Kumaraswamy  gave ten thousand rs to nabisab family of dharawad
ನಬೀಸಾಬ್ ಕುಟುಂಬಕ್ಕೆ ಮಾಜಿ ಸಿಎಂ ಹೆಚ್​ಡಿಕೆ ನೆರವು

ಧಾರವಾಡ : ತಾಲೂಕಿನ ನುಗ್ಗಿಕೇರಿ ಹನುಮಂತ ದೇವಸ್ಥಾನದ ಆವರಣದಲ್ಲಿದ್ದ ಹಿಂದೂಯೇತರ ಅಂಗಡಿ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನಿನ್ನೆ ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕ ನಬಿಸಾಬ್‌ಗೆ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಆರ್ಥಿಕ‌ ನೆರವು ನೀಡಿದ್ದಾರೆ. ತಮ್ಮ ಆಪ್ತರ ಮೂಲಕ ಹತ್ತು ಸಾವಿರ ರೂ. ನೆರವು ನೀಡಿದ್ದಾರೆ.

ಇದನ್ನೂ ಓದಿ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಹಿಂದೂಯೇತರ ಅಂಗಡಿ ತೆರವು

ನಿನ್ನೆ (ಶನಿವಾರ) ನಡೆದ ಗಲಾಟೆಯಲ್ಲಿ ವ್ಯಾಪಾರಿ ನಬೀಸಾಬ್ ಅವರ 5 ರಿಂದ 6 ಕ್ವಿಂಟಾಲ್ ಕಲ್ಲಂಗಡಿ ಹಣ್ಣು ಹಾನಿಯಾಗಿತ್ತು. ಇದರಿಂದ ವ್ಯಾಪಾರಿ ನಬೀಸಾಬ್ ನಷ್ಟ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಹೆಚ್‌ಡಿಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಇನ್ನು ಘಟನೆ ಬಗ್ಗೆ ಪ್ರಕ್ರಿಯಿಸಿದ್ದು, ತಿನ್ನುವ ಅನ್ನವನ್ನು ಕಿತ್ತುಕೊಂಡು ಏನ್ ಮಾಡ್ತೀರಿ? ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ನಬೀಸಾಬ್ ಕುಟುಂಬಕ್ಕೆ ಮಾಜಿ ಸಿಎಂ ಹೆಚ್​ಡಿಕೆ ಆರ್ಥಿಕ ನೆರವು..

ಹಿನ್ನೆಲೆ : ಕಳೆದ 15 ದಿನಗಳ ಹಿಂದೆ ಶ್ರೀರಾಮಸೇನಾ ಕಾರ್ಯಕರ್ತರು ನುಗ್ಗಿಕೇರಿ ಹನುಮಂತ ದೇವಸ್ಥಾನದ ಆವರಣದಲ್ಲಿ ಹಿಂದೂಯೇತರ ಅಂಗಡಿಗಳ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಮನವಿ ನೀಡಿದ್ದರು. ಮನವಿ ಸ್ವೀಕರಿಸಿದ್ದ ದೇವಸ್ಥಾನದ ಆಡಳಿತ ಮಂಡಳಿ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಭರವಸೆ ನೀಡಿತ್ತು.

ಆದರೆ, ಈ ಕುರಿತು ದೇವಸ್ಥಾನ ಸಮಿತಿ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ನಿನ್ನೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಿಕೇರಿಗೆ ಬಂದು ಹಿಂದೂಯೇತರ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.