ಹುಬ್ಬಳ್ಳಿ: ವಿದ್ಯುತ್ ತಂತಿ ತಗುಲಿ ಹಸು ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಮ್ಯಾದಾರ ಓಣಿಯಲ್ಲಿ ನಡೆದಿದೆ.
ಹಲವು ದಿನಗಳ ಹಿಂದೆಯೇ ರಸ್ತೆಯಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿತ್ತು. ಈ ಕುರಿತು ಸಾರ್ವಜನಿಕರು ಹೆಸ್ಕಾಂ ಅಧಿಕಾರಿಗಳಿಗೆ ಅನೇಕ ಬಾರಿ ಮಾಹಿತಿ ನೀಡಿದರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ. ಅಷ್ಟೇ ಅಲ್ಲದೆ ಹಿಂದೆಯೂ ಕೂಡ ಹಲವು ಸಾರಿ ಇದೇ ರೀತಿ ನಾಯಿಗಳು ಸಹ ತಂತಿ ತಗುಲಿ ಸಾವನ್ನಪ್ಪಿದ್ದು , ಹೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಹಸು ಸಾವಿಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದರು.
ಇನ್ನಾದರೂ ಹೆಸ್ಕಾಂ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲ್ಲಿ ಎನ್ನುವುದು ಸಾರ್ವಜನಿಕರ ಆಶಯ.