ಹುಬ್ಬಳ್ಳಿ: ಅನರ್ಹ ಶಾಸಕರು ಉಪ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 15 ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ಅವರ ಪ್ರಕರಣ ನಡೆಯುತ್ತೆ. ಸುಪ್ರೀಂ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳುತ್ತೆ ನೋಡೋಣ ಎಂದರು.
ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಥಣಿಯಿಂದ ಡಿಸಿಎಂ ಲಕ್ಷ್ಮಣ ಸವದಿ ಸ್ಪರ್ಧಿಸುತ್ತಾರೋ ಇಲ್ಲವೋ ಎನ್ನುವುದನ್ನ ಕಾದು ನೋಡಿ ಎಂದರು.
ನನ್ನ ಪ್ರಕಾರ ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ಅಡ್ಡಿ ಆಂತಕ ಇಲ್ಲ. ಚುನಾವಣೆ ಘೋಷಣೆಯಿಂದ ನೆರೆ ಪರಿಹಾರ ಕಾಮಗಾರಿಗೂ ಯಾವುದೇ ತೊಂದರೆಯಾಗಲ್ಲ. ಜಿಲ್ಲಾಡಳಿತ ಎಲ್ಲವೂ ಅಚ್ಚುಕಟ್ಟಾಗಿ ನಿಭಾಯಿಸುತ್ತದೆ ಎಂದು ಭರವಸೆ ನೀಡಿದರು.