ಧಾರವಾಡ: ಖಾಸಗಿ ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 60ಕ್ಕೇರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ಎತ್ತಿ ಹಿಡಿಯಿತು. ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸನ್ನು ಏರಿಸಿ ಸರ್ಕಾರ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಹರಿಹರದ ಖಾಸಗಿ ಕಂಪನಿಯೊಂದು ಹೈಕೋರ್ಟ್ ಮೊರೆ ಹೋಗಿತ್ತು.
ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ 2021ರ ಸೆ. 17ರಂದು ವಜಾಗೊಳಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಕಂಪನಿ ಮೇಲ್ಮನವಿ ಸಲ್ಲಿಸಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನೇ ಎತ್ತಿ ಹಿಡಿದಿದೆ.
ಇದನ್ನೂ ಓದಿ: ಎಸಿಬಿ ಸೇರಿ ಉನ್ನತ ಹುದ್ದೆಗಳಿಗೆ ಕಳಂಕಿತ ಅಧಿಕಾರಿಗಳನ್ನು ನೇಮಿಸದಂತೆ ಹೈಕೋರ್ಟ್ ನಿರ್ದೇಶನ