ಹುಬ್ಬಳ್ಳಿ: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಇಂದು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಇಂದು ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ ಅಡ್ವಾಣಿ, ಮರಳಿ ಮನೋಹರ ಜೋಶಿ, ಉಮಾಭಾರತಿ, ಕಲ್ಯಾಣ್ ಸಿಂಗ್ ಸೇರಿದಂತೆ 32 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ.
ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು, ಪ್ರತಿಭಟನೆಗಳು, ಸಂಭ್ರಮಾಚರಣೆಗಳು ನಡೆಯುವ ಸಾಧ್ಯತೆ ಹೆಚ್ಚಾಗಿದೆ. ಈ ಕಾರಣದಿಂದ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲೂ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹು-ಧಾ ಪೋಲಿಸ್ ಆಯುಕ್ತರು ಆಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.