ಹುಬ್ಬಳ್ಳಿ: ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಗಬ್ಬೂರು ಬೈಪಾಸ್ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಗ್ರಾಮೀಣ ಭಾಗದತ್ತ ಹೊರಟಿದ್ದ ಆಟೋಗೆ ಲಾರಿಯೊಂದು ಡಿಕ್ಕಿ ಹೊಡೆಯಿತು. ಇದರಿಂದ ಆಟೋದ ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ದೇಹಗಳೆರಡು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಪೊಲೀಸರು ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಶವಗಳನ್ನು ಕಿಮ್ಸ್ಗೆ ರವಾನಿಸಲಾಗಿದೆ.
ಪೂರ್ವ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.