ETV Bharat / city

ಹು-ಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ : ಬಿಜೆಪಿ ವಲಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..

ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯಲು ಮ್ಯಾಜಿಕ್‌ ಸಂಖ್ಯೆ 42 ಸದಸ್ಯರ ಬಲದ ಅಗತ್ಯವಿದೆ. ಪಕ್ಷೇತರರಾಗಿ ಗೆಲುವು ಪಡೆದ ಒಬ್ಬರು ಬಿಜೆಪಿ ಸೇರ್ಪಡೆಯಾಗಿದ್ದರಿಂದ ಈ ಪಕ್ಷದ ಬಲ 40ಕ್ಕೆ ಏರಿಕೆಯಾಗಿದೆ. ಬಿಜೆಪಿಗೆ ಅಧಿಕಾರದ ಗದ್ದುಗೆ ಏರುವ ಹಾದಿ ಬಹುತೇಕ ಸುಗಮವಾಗಿದೆ..

Hu-dha Corporation mayor, deputy mayoral election
ಹು-ಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ
author img

By

Published : May 13, 2022, 5:37 PM IST

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಆಯ್ಕೆಯ ಚುನಾವಣೆಯ ಫಲಿತಾಂಶ ಬಂದು ಒಂಬತ್ತು ತಿಂಗಳ ಬಳಿಕ ಮೇಯರ್‌ ಹಾಗೂ ಉಪಮೇಯರ್‌ ಆಯ್ಕೆಗೆ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಇದರ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಚಟುವಟಿಕೆ ಗರಿಗೆದರಿದೆ. ಅಧಿಸೂಚನೆಯ ಪ್ರಕಾರ ಮೇಯರ್ ಸ್ಥಾನ ಸಾಮಾನ್ಯ ವರ್ಗ ಹಾಗೂ ಉಪಮೇಯರ್‌ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಪಾಲಿಕೆಗೆ ಆಯ್ಕೆಯಾಗಿರುವ ಒಟ್ಟು 82 ಸದಸ್ಯರ ಪೈಕಿ 39 ಬಿಜೆಪಿ, 33 ಕಾಂಗ್ರೆಸ್, 6 ಪಕ್ಷೇತರರು, 3 ಎಐಎಂಐಎಂ ಹಾಗೂ ಒಬ್ಬರು ಜೆಡಿಎಸ್‌ ಸದಸ್ಯರಿದ್ದಾರೆ. ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯಲು ಮ್ಯಾಜಿಕ್‌ ಸಂಖ್ಯೆ 42 ಸದಸ್ಯರ ಬಲದ ಅಗತ್ಯವಿದೆ. ಪಕ್ಷೇತರರಾಗಿ ಗೆಲುವು ಪಡೆದ ಒಬ್ಬರು ಬಿಜೆಪಿ ಸೇರ್ಪಡೆಯಾಗಿದ್ದರಿಂದ ಈ ಪಕ್ಷದ ಬಲ 40ಕ್ಕೆ ಏರಿಕೆಯಾಗಿದೆ. ಸ್ಥಳೀಯ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರ ಬಲದಿಂದ ಬಿಜೆಪಿಗೆ ಅಧಿಕಾರದ ಗದ್ದುಗೆ ಏರುವ ಹಾದಿ ಬಹುತೇಕ ಸುಗಮವಾಗಿದೆ.

ಹೀಗಾಗಿ, ಬಿಜೆಪಿಯಿಂದ ಆಯ್ಕೆಯಾಗಿ ಮೇಯರ್ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸದಸ್ಯರು, ಮೇಯರ್‌ ಸ್ಥಾನಕ್ಕೆ ಪರಿಗಣಿಸಿ ಎಂದು ತಮ್ಮ ನಾಯಕರು ಹಾಗೂ ಪಕ್ಷದ ವರಿಷ್ಠರನ್ನು ಮನವೊಲಿಸುವಲ್ಲಿ ನಿರತರಾಗಿದ್ದಾರೆ. ಜೊತೆಗೆ, ತಮ್ಮ ಬೆಂಬಲಿಗರಿಂದಲೂ ನಾಯಕರ ದುಂಬಾಲು ಬಿದಿದ್ದಾರೆ. ಸತತ ಮೂರನೇ ಬಾರಿಗೆ ಪಾಲಿಕೆಯ ಚುಕ್ಕಾಣಿ ಹಿಡಿಯಲು ಬಿಜೆಪಿ ಮುಂದಾಗಿದೆ. ಈ ಬಾರಿ ಧಾರವಾಡದಿಂದ ಈರೇಶ ಅಂಚಟಗೇರಿ, ವಿಜಯಾನಂದ ಶೆಟ್ಟಿ ಹಾಗೂ ಮಾಜಿ ಮೇಯರ್‌ ಶಿವು ಹಿರೇಮಠ್ ಅವರ ಹೆಸರುಗಳು ಮೇಯರ್ ಹುದ್ದೆಗೆ ಪ್ರಮುಖವಾಗಿ ಕೇಳಿ ಬರುತ್ತಿವೆ.

ಹುಬ್ಬಳ್ಳಿಯಿಂದಲೂ ಕೆಲವರ ಹೆಸರು ಮುಂಚೂಣಿಯಲ್ಲಿವೆ. ಹಿಂದೆ ಜೆಡಿಎಸ್‌ನಲ್ಲಿದ್ದು ಈಗ ಬಿಜೆಪಿಯಿಂದ ಗೆದ್ದಿರುವ ವಿರೋಧ ಪಕ್ಷದ ನಾಯಕನ ಸ್ಥಾನ ನಿಭಾಯಿಸಿದ ಅನುಭವ ಹೊಂದಿರುವ ರಾಜಣ್ಣ ಕೊರವಿ, ಹಿರಿಯ ಸದಸ್ಯರಾದ ಉಮೇಶ ಕೌಜಗೇರಿ, ಶಿವು ಮೆಣಸಿನಕಾಯಿ, ರಾಮಣ್ಣ ಬಡಿಗೇರ, ತಿಪ್ಪಣ್ಣ ಮಜ್ಜಗಿ, ಮಾಜಿ ಮೇಯರ್ ವೀರಣ್ಣ ಸವಡಿ ಅವರ ಹೆಸರುಗಳು ಚಾಲ್ತಿಯಲ್ಲಿವೆ.

ಅವಳಿ ನಗರಗಳಾದರೂ ಸೌಲಭ್ಯ ಕಲ್ಪಿಸುವಲ್ಲಿ ಮತ್ತು ಅನುದಾನ ಒದಗಿಸುವಲ್ಲಿ ಧಾರವಾಡವನ್ನು ಕಡೆಗಣಿಸಲಾಗಿದೆ. ಆದ್ದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎನ್ನುವ ಕೂಗು ಅಲ್ಲಿ ಜೋರಾಗಿದೆ. ಇದರ ನಡುವೆಯೇ ಅಳೆದು ತೂಗಿ ಮೇಯರ್‌ ಪಟ್ಟ ಯಾರಿಗೆ ನೀಡಬೇಕು ಎನ್ನುವ ಚರ್ಚೆ ಬಿಜೆಪಿಯಲ್ಲಿ ನಡೆಯುತ್ತಿದೆ.

ಇದನ್ನೂ ಓದಿ: ಪರಿಷತ್,ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕುರಿತು ನಾಳೆ ಕೋರ್ ಕಮಿಟಿ ಸಭೆ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.