ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಐಎಂಐಎಂ ಕಾರ್ಪೊರೇಟರ್ ನಜೀರ್ ಅಹ್ಮದ್ ಹೊನ್ಯಾಳ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಬಳಿಕ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಕಾರ್ಪೋರೇಟರ್ನನ್ನು ಬಂಧಿಸಲಾಗಿದೆ.
ಇಂದು ಮಧ್ಯಾಹ್ನ ಪ್ರಕರಣ ಸಂಬಂಧ ಕಾರ್ಪೊರೇಟರ್ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಈ ವೇಳೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಆ ಬಳಿಕ ಕಿಮ್ಸ್ನಲ್ಲಿ ಕಾರ್ಪೊರೇಟರ್ ಆರೋಗ್ಯ ತಪಾಸಣೆ ನಡೆಸಲಾಯಿತು.
ಗಲಭೆಯ ಪ್ರಮುಖ ಆರೋಪಿ ಎನ್ನಲಾದ ವಾಸೀಂ ಪಠಾಣ್ನನ್ನು ಕೂಡ ಪೊಲೀಸರು ಆರೋಗ್ಯ ತಪಾಸಣೆಗೊಳಪಡಿಸಿದ್ದಾರೆ. ಈಗಾಗಲೇ ವಾಸೀಂ ಪಠಾಣ್ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದು, ಗಲಭೆಯ ಕುರಿತು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ವಾಸೀಂ ಪಠಾಣ್ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ