ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ ತನಿಖೆ ಚುರುಕುಗೊಂಡಿದೆ. ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ 5 ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೂ ಒಟ್ಟು 12 ಕೇಸುಗಳು ದಾಖಲಾಗಿವೆ ಎಂದು ಹುಬ್ಬಳ್ಳಿ-ಧಾರಾವಾಡ ಅವಳಿ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಹೇಳಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮಾತನಾಡಿದ ಅವರು, ಗಲಭೆ ಮಾಡಿದ್ದವರಲ್ಲಿ ಮತ್ತೆ 15 ಜನರn್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 104 ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದುಷ್ಕರ್ಮಿಗಳು ದೇವಸ್ಥಾನ, ಮನೆ, ಆಸ್ಪತ್ರೆ ಹಾಗೂ ಪೋಸ್ಟ್ ಆಫೀಸಿನ ಮೇಲೆ ಕಲ್ಲು ತೂರಾಟ ನಡೆಸಿರುವ ಬಗ್ಗೆ ಹಲವು ಪ್ರಕರಣಗಳು ದಾಖಲಾಗಿವೆ. ಜೊತೆಗೆ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳ ಹಾನಿಯ ಬಗ್ಗೆಯೂ ಕೇಸ್ ಗಳು ದಾಖಲಾಗಿವೆ ಎಂದು ಹೇಳಿದ್ದಾರೆ. ನಗರದ ವಿವಿಧೆಡೆ ಸೂಕ್ತ ಬಂದೋಬಸ್ತ್ ಒದಗಿಸಲಾಗಿದ್ದು, ಬೇರೆ ಕಡೆಗಳಲ್ಲಿ ಗಲಾಟೆಗಳು ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ಇದೇ ವೇಳೆ ವಿವರಿಸಿದ್ದಾರೆ.
ಓದಿ : ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರ ಬಂಧನವಾಗಿಲ್ಲ: ಸಿಎಂ ಬೊಮ್ಮಾಯಿ