ಹುಬ್ಬಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಜಾರಿಗೆ ತಂದಿರುವ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆನ್ನುವ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿರುವ ಪ್ರತಿಭಟನೆಗೆ ಇದುವರೆಗೂ ಯಾವುದೇ ಸಂಘಟನೆಗಳು ರಸ್ತೆಗೆ ಇಳಿದಿಲ್ಲ. ನಗರದಲ್ಲಿ ಬೆಳಗ್ಗೆ ಸಹಜ ಸ್ಥಿತಿ ಇದ್ದು, ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸದ್ಯ ಧಾರವಾಡ ಜಿಲ್ಲೆಯಲ್ಲಿ ಯಾವುದೇ ಪ್ರತಿಭಟನೆ ಇಲ್ಲ. ಅಲ್ಲದೇ ಬೆಳಗ್ಗೆ 10:30 ನಂತರ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲು ಹೋರಾಟಗಾರರು ನಿರ್ಧರಿಸಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಗಬ್ಬೂರು ಬೈಪಾಸ್‌ನಲ್ಲಿ ಹೆದ್ದಾರಿ ಬಂದ್ ಮಾಡಲು ಮುಂದಾಗಿದ್ದಾರೆ.
![Hubli Bund boring response morning Today](https://etvbharatimages.akamaized.net/etvbharat/prod-images/kn-hbl-01-no-bundh-av-7208089_25092020094609_2509f_1601007369_1004.png)