ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದು ಒಂದೆಡೆಯಾದ್ರೆ, ಬಹುತೇಕ ರಸ್ತೆಗಳಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಗಿದೆ.
ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಪರಿಣಾಮ ವಾಹನಗಳನ್ನು ಎಲ್ಲಿ ಬೇಕಾದಲ್ಲಿ ನಿಲ್ಲಿಸುವುದು ಸಾಮಾನ್ಯವಾಗಿದೆ. ಇದರಿಂದಾಗಿ ಪಾದಚಾರಿಗಳಿಗೆ ಹಾಗೂ ಇತರೆ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ.
ವರ್ಷದಿಂದ ವರ್ಷಕ್ಕೆ ಮಾರುಕಟ್ಟೆ ಬೆಳೆಯುತ್ತಿದೆ. ಪ್ರತಿನಿತ್ಯ ನೂರಾರು ವಾಹನಗಳು ಮಾರುಕಟ್ಟೆಗೆ ಬರುತ್ತಿರುತ್ತವೆ. ಅಡ್ಡಾದಿಡ್ಡಿಯಾಗಿ ವಾಹನ ನಿಲ್ಲಿಸುವುದರಿಂದ ಅಪಘಾತಗಳು ಸಹ ಉಂಟಾಗುವ ಸಾಧ್ಯತೆ ಇದೆ.
ಕೆಲವೆಡೆ ರಸ್ತೆಯ ತುಂಬಾ ಗುಂಡಿ ಬಿದ್ದಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಮಾರ್ಟ್ ಸಿಟಿ ಹಾಗೂ ಫ್ಲೈಓವರ್ ಕಾಮಗಾರಿ ಮುಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.