ETV Bharat / city

ಕೋವಿಡ್​ ನಿಯಮ ಮರೆತು ತರಕಾರಿ ಖರೀದಿಗೆ ಮುಗಿಬಿದ್ದ ಜನ: ವ್ಯಾಪಾರಿಗಳ ತೆರವುಗೊಳಿಸಿದ ಪಾಲಿಕೆ

author img

By

Published : Jul 16, 2020, 4:55 PM IST

ಹುಬ್ಬಳ್ಳಿಯ ಸರಾಫಗಟ್ಟಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಎಲ್ಲೆಂದರಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದಾರೆ.

Sarafagatti market news
ಲಾಕ್​ಡೌನ್

ಹುಬ್ಬಳ್ಳಿ: ಲಾಕ್​ಡೌನ್​ ಹಿನ್ನೆಲೆಯಲ್ಲಿ ಅವಳಿ ನಗರಗಳಲ್ಲಿ ಜನರು ಕೋವಿಡ್​ ನಿಯಮಗಳನ್ನು ಗಾಳಿಗೆ ತೂರಿ ತರಕಾರಿ ಖರೀದಿಗೆ ಮುಗಿಬಿದ್ದಿದ್ದು, ವ್ಯಾಪಾರಿಗಳನ್ನು ಪಾಲಿಕೆ ಸಿಬ್ಬಂದಿ ಬಿಸಿ ಮುಟ್ಟಿಸಿದ್ದಾರೆ.

ಹುಬ್ಬಳ್ಳಿಯ ಸರಾಫಗಟ್ಟಿ ಮಾರುಕಟ್ಟೆ

ಹುಬ್ಬಳ್ಳಿಯಲ್ಲಿ ಲಾಕ್​​ಡೌನ್​ ಘೋಷಣೆಯಾಗಿದ್ದು, ಮಧ್ಯಾಹ್ನ 12 ಗಂಟೆಯ ವರೆಗೆ ಮಾತ್ರ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ನಗರದ ಸರಾಫಗಟ್ಟಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಎಲ್ಲೆಂದರಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದಾರೆ.

ಪಾಲಿಕೆ ಅಧಿಕಾರಿಗಳ ಆದೇಶದ ಮೇರೆಗೆ ವ್ಯಾಪಾರಸ್ಥರು ಆಟೋ, ಟ್ರ್ಯಾಕ್ಟರ್​​ಗಳಲ್ಲಿ ತರಕಾರಿ ತುಂಬಿಕೊಂಡು ಹೋಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.