ETV Bharat / city

ಇನ್ನೂ ಮುಗಿಯದ ಮಳಿಗೆದಾರರು- ಸಾರಿಗೆ ಅಧಿಕಾರಿಗಳ ವಾಗ್ವಾದ

ಹುಬ್ಬಳ್ಳಿ ಹಳೇ ಬಸ್‌ ನಿಲ್ದಾಣದಲ್ಲಿನ 31 ಮಳಿಗೆಗಳನ್ನು ಒಪ್ಪಂದದಂತೆ ತೆರವುಗೊಳಿಸುವಂತೆ ವಾಯವ್ಯ ಸಾರಿಗೆ ಇಲಾಖೆ ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ. ಆದರೆ, ಮಳಿಗೆದಾರರು ತಾವು ಕೊರೊನಾದಿಂದಾಗಿ ಸಂಕಷ್ಟದಲ್ಲಿದ್ದು, ಮಳಿಗೆಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ.

author img

By

Published : Sep 26, 2020, 6:31 PM IST

Hubli Old Bus Stand  shopers and transport officials conflict
ಹುಬ್ಬಳ್ಳಿ: ಇನ್ನೂ ಮುಗಿಯದ ಮಳಿಗೆದಾರರು ಹಾಗೂ ಸಾರಿಗೆ ಅಧಿಕಾರಿಗಳ ವಾಗ್ವಾದ

ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣದಲ್ಲಿನ ಅಂಗಡಿ ಮಾಲೀಕರು ಹಾಗೂ‌ ವಾಯವ್ಯ ಸಾರಿಗೆ ಇಲಾಖೆ ಅಧಿಕಾರಿಗಳ‌ ನಡುವಿನ‌ ವಾಗ್ವಾದ ಇನ್ನೂ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

ಹೌದು..ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ 32 ವಾಣಿಜ್ಯ ಮಳಿಗೆಗಳಿವೆ. 30 ಸಾವಿರದಿಂದ 7 ಲಕ್ಷ ರೂ. ವರೆಗೆ ಮಾಸಿಕ ಬಾಡಿಗೆ ಮೇಲೆ ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಇದೀಗ ಸ್ಮಾರ್ಟ್ ಸಿಟಿ ಯೋಜನೆಯ 30 ಕೋಟಿ ರೂ. ವೆಚ್ಚದಲ್ಲಿ ಈ ಬಸ್​ ನಿಲ್ದಾಣಕ್ಕೆ ಹೊಸ ರೂಪ ನೀಡಲು ಸಾರಿಗೆ ಇಲಾಖೆ ಯೋಜನೆ ರೂಪಿಸಿದೆ.

ಹೊಸ ಬಸ್ ನಿಲ್ದಾಣ ನಿರ್ವಿುಸುವುದು ಖಚಿತವಾಗುತ್ತಿದ್ದಂತೆ ವಿಭಾಗೀಯ ನಿಯಂತ್ರಣಾದಿಕಾರಿ ಹೆಚ್.ರಾಮನಗೌಡ ಜೂನ್​ 19ರಂದು ಅಂಗಡಿ ಮಾಲೀಕರ ಬಳಿ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲು ತಾವು ಸಿದ್ಧವಿರುವುದಾಗಿ ಹಾಗೂ ತಮ್ಮದು ಯಾವುದೇ ಆಕ್ಷೇಪಣೆಗಳಿಲ್ಲ ಎಂದು ಒಪ್ಪಿಗೆ ಪತ್ರ ಬರೆಯಿಸಿಕೊಂಡಿದ್ದರು.

ಆದ್ರೀಗ ಕೊರೊನಾದಿಂದ ಪ್ರಯಾಣಿಕರ ಸಂಖ್ಯೆಯೂ ಇಳಿಮುಖವಾಗಿರುವುದರ ಜೊತೆಗೆ ಹಳೇ ಬಸ್ ನಿಲ್ದಾಣವನ್ನು ಗ್ರಾಮೀಣ ಸಾರಿಗೆ ಬಸ್​ಗಳ ಓಡಾಟಕ್ಕೆ ಸೀಮಿತಗೊಳಿಸಲಾಗಿದೆ. ಹೀಗಾಗಿ ನಾವು ಸಂಕಷ್ಟಕ್ಕೆ ಸಿಲುಕಿದ್ದೇವೆ. ಈ ಸಮಯದಲ್ಲಿ ಮಳಿಗೆಗೆಗಳನ್ಮು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಅಂಗಡಿ ಮಾಲೀಕರು ಮನವಿ ಮಾಡಿದ್ದಾರೆ. ಇದಕ್ಕೆ ಒಪ್ಪದ ಸಾರಿಗೆ ಇಲಾಖೆ ಅಧಿಕಾರಿಗಳು, ಮಳಿಗೆ ತೆರವುಗೊಳಿಸುವಂತೆ ಪಟ್ಟು ಹಿಡಿದಿದ್ದಾರೆ.

ಇನ್ನು, ಹು-ಧಾ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯವರು ಮಳಿಗೆ ತೆರವುಗೊಳಿಸಿ, ಕಟ್ಟಡ ಕೆಡವಿದ ಬಳಿಕ ತಮಗೆ ತಿಳಿಸುವಂತೆ ವಾಯವ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.