ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾದ್ರೂ ಜನ ಎಚ್ಚೆತ್ತುಕೊಂಡಿಲ್ಲ. ಲಾಕ್ ಡೌನ್ ನಡುವೆಯೂ ಸಾರ್ವಜನಿಕರು ರಸ್ತೆಗೆ ಇಳಿದು ಮೊಂಡುತನ ಪ್ರದರ್ಶನ ಮಾಡುತ್ತಿದ್ದು, ಬೀದಿಗೆ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ.
ನಗರದಾದ್ಯಂತ ಕಂಟೇನ್ಮಂಟ್ ಪ್ರದೇಶವಾಗಿ ಘೋಷಣೆ ಮಾಡಿದ್ರೂ ಸಾರ್ವಜನಿಕರ ಓಡಾಟ ನಿಲ್ಲುತ್ತಿಲ್ಲ. ಹಾಗಾಗಿ ನಗರದ ಚೆನ್ನಮ್ಮ ವೃತ್ತದಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ಪೊಲೀಸರು ಬಿಸಿ ಬಿಸಿ ಕಜ್ಜಾಯ ಕೊಟ್ಟು ಕಳಿಸಿದ್ದಾರೆ. ಸಾರ್ವಜನಿಕರ ಈ ನಡೆ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.