ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಬೆಂಗಳೂರಿನ ವಿಶೇಷ ಕೋರ್ಟ್ಗೆ ವರ್ಗಾಯಿಸಿ ಹುಬ್ಬಳ್ಳಿ ನಾಲ್ಕನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿ, ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಎದುರಿಸುವಂತೆ ಸೂಚನೆ ನೀಡಿದೆ.
ಯುವಕನ ಪ್ರಚೋದನಕಾರಿ ವಾಟ್ಸ್ಆ್ಯಪ್ ಸ್ಟೇಟಸ್ ವಿರೋಧಿಸಿ ನಡೆದ ಕಲ್ಲು ತೂರಾಟ ನಡೆಸಲಾಗಿತ್ತು. ಆ ಬಳಿಕ ಹುಬ್ಬಳ್ಳಿಯಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿ, ನಿಷೇಧಾಜ್ಞೆ ವಿಧಿಸಲಾಗಿತ್ತು. ಗಲಭೆಗೆ ಕಾರಣರಾದ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
(ಇದನ್ನೂ ಓದಿ: ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣ, ಆರೋಪಿಗಳ ಪತ್ತೆಗೆ ಅಡ್ಡಿಯಾದ ನಿಷ್ಕ್ರಿಯ ಸಿಸಿ ಟಿವಿಗಳು)
(ಇದನ್ನೂ ಓದಿ: ಹುಬ್ಬಳ್ಳಿ : ಲವ್ ಜಿಹಾದ್ ಎಂದು ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಯುವಕನ ಬಂಧನ)