ಹುಬ್ಬಳ್ಳಿ: ಭಾರತೀಯ ಸೇನೆಯ ಜಮ್ಮು-ಕಾಶ್ಮೀರದ 19 ಮದ್ರಾಸ್ ಬೆಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದ, ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರದ ಯೋಧ ಮಂಜುನಾಥ ಹನುಮಂತಪ್ಪ ವಾಲಿಕಾರ (29) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಮಂಜುನಾಥ ಅವರು ಜಮ್ಮು-ಕಾಶ್ಮೀರದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ ಎನ್ನಲಾಗಿತ್ತು. ಆದ್ರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿದ ಗ್ರಾಮಸ್ಥರು ಹಾಗೂ ಸಂಬಂಧಿಗಳಿಗೆ ಬರಸಿಡಿಲು ಬಡಿದಂತಾಗಿದೆ.
ಅವರ ಪಾರ್ಥಿವ ಶರೀರ ಇಂದು ಸ್ವಗ್ರಾಮಕ್ಕೆ ಆಗಮಿಸಲಿದ್ದು, ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ಇಲ್ಲ. ಆದರೆ ಜಿಲ್ಲಾಡಳಿತ ಅಗತ್ಯ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.