ಧಾರವಾಡ : ಹುಬ್ಬಳ್ಳಿ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟು ನೋಡಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿರುತ್ತದೆ. ಅದು ಬಿಟ್ಟು ಎಂಎಲ್‌ಎ, ಮಿನಿಸ್ಟರ್ ಮನೆ ಕಾಯುವಂತೆ ಮಾಡಬೇಡಿ ಎಂದು ಧಾರವಾಡದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.
ಶಾಸಕಾಂಗ ಕಾರ್ಯಾಂಗಕ್ಕೆ ಕೈ ಹಾಕಿದ್ರೆ ಇದೆಲ್ಲ ಆಗುತ್ತದೆ. ಪೊಲೀಸ್ ಅಧಿಕಾರಿಗಳನ್ನು ತಮಗೇ ಬೇಕಾದ ಹಾಗೆ ನೇಮಕ ಮಾಡಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಹಣವೂ ನಡೆಯುತ್ತದೆ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಆದರೆ, ಲಕ್ಷಾಂತರ ರೂಪಾಯಿ ಕೊಟ್ಟು ಬಂದವರು ಹೇಗೆ ನಿಷ್ಠೆಯಿಂದಿರುತ್ತಾರೆ ಎಂದು ಪ್ರಶ್ನಿಸಿದರು.
ಸರ್ಕಾರದಲ್ಲಿ ಭ್ರಷ್ಟಾಚಾರ ನಡೀತಿದೆ. ಇದನ್ನು ಮುಚ್ಚಿ ಹಾಕಲು ಇಂತಹ ಕಲಹಗಳನ್ನು ಹುಟ್ಟು ಹಾಕುತ್ತಿದ್ದಾರೆ. ಬೇಕಂತಲೇ ಪ್ರಚೋದನಾಕಾರಿ ಹೇಳಿಕೆಗಳನ್ನು ಕೊಟ್ಟು ಸಣ್ಣ ವಿಷಯಗಳನ್ನು ಮುನ್ನೆಲೆಗೆ ತಂದು ವೈಷಮ್ಯ ಬಿತ್ತುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ: ಹುಬ್ಬಳ್ಳಿ ಹಿಂಸಾಚಾರ ಪ್ರಕರಣ : ಕಠಿಣ ಕ್ರಮಕ್ಕೆ ನಳಿನ್‍ಕುಮಾರ್ ಕಟೀಲ್ ಮನವಿ