ETV Bharat / city

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರ ಆಕ್ರೋಶ

ದಿನದಿಂದ ದಿನಕ್ಕೆ ಅಡುಗೆ ಅನಿಲ ಬೆಲೆ ಗಗನಕ್ಕೇರುತ್ತಿದ್ದು ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆಯರು ರಸ್ತೆ ಮಧ್ಯದಲ್ಲೇ ಅಡುಗೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು‌.

hubli women congress activist protest in front  bjp office
ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು
author img

By

Published : Mar 2, 2021, 10:34 PM IST

ಹುಬ್ಬಳ್ಳಿ: ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತೆಯರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು

ಕೂಡಲೇ ಸರ್ಕಾರ ಅಡುಗೆ ಅನಿಲ ಬೆಲೆ ಸೇರಿದಂತೆ ಇನ್ನಿತರ ಬೆಲೆಗಳನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಹಿಳೆಯರನ್ನು ತಡೆಯಲು ಮಹಿಳಾ ಪೊಲೀಸ್ ಸಿಬ್ಬಂದಿ ಹರಸಾಹಸ ಪಡುವಂತಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.