ETV Bharat / city

ಹುಬ್ಬಳ್ಳಿಯಲ್ಲಿ ಪರ್ಯಾಯ ಮಾರುಕಟ್ಟೆಯ ಅವ್ಯವಸ್ಥೆ ಕಂಡು ಕಂಗಾಲಾದ ವ್ಯಾಪಾರಸ್ಥರು - Hubli's Janata Bazaar Market traders problem

ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿಯ 'ಜನತಾ ಬಜಾರ್' ಮಾರುಕಟ್ಟೆಯನ್ನು ಹೊಸದಾಗಿ ನಿರ್ಮಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಇಲ್ಲಿನ ವ್ಯಾಪಾರಸ್ಥರಿಗೆ ಬೇರೆ ಕಡೆ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ, ಅಲ್ಲಿರುವ ಅವ್ಯವಸ್ಥೆ ಕಂಡು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.

Hubli's Janata Bazaar Market traders problem
ಪರ್ಯಾಯ ಮಾರುಕಟ್ಟೆಯ ಅವ್ಯವಸ್ಥೆ ಕಂಡು ಕಂಗಾಲಾದ ವ್ಯಾಪಾರಸ್ಥರು
author img

By

Published : Apr 7, 2021, 9:41 AM IST

ಹುಬ್ಬಳ್ಳಿ: ನಗರದ ಚೆನ್ನಮ್ಮ ಸರ್ಕಲ್ ಬಳಿಯಿರುವ 'ಜನತಾ ಬಜಾರ್' ಮಾರುಕಟ್ಟೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾಗಿದ್ದು, ಇಲ್ಲಿನ ವ್ಯಾಪಾರಸ್ಥರಿಗೆ ಬೇರೆಡೆ ವ್ಯಾಪಾರಕ್ಕೆ ಮಹಾನಗರ ಪಾಲಿಕೆ ವ್ಯವಸ್ಥೆ ಮಾಡಿಕೊಟ್ಟಿದೆ. ಆದರೆ, ಅಲ್ಲಿರುವ ಅವ್ಯವಸ್ಥೆ ಕಂಡು ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಪರ್ಯಾಯ ಮಾರುಕಟ್ಟೆಯ ಅವ್ಯವಸ್ಥೆ ಕಂಡು ಕಂಗಾಲಾದ ವ್ಯಾಪಾರಸ್ಥರು

ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 18.35 ಕೋಟಿ ರೂ. ವೆಚ್ಚದಲ್ಲಿ 'ಜನತಾ ಬಜಾರ್' ಮಾರುಕಟ್ಟೆಯನ್ನು ಹೊಸದಾಗಿ ನಿರ್ಮಿಸಲು ಮಹಾನಗರ ಪಾಲಿಕೆ ಮುಂದಾಗಿದ್ದು, ಇಲ್ಲಿನ ವ್ಯಾಪಾರ ಸಂಪೂರ್ಣ ಸ್ಥಗಿತಗೊಂಡಿದೆ. ಇಲ್ಲಿನ ವ್ಯಾಪಾರಸ್ಥರಿಗೆ ಹೊಸೂರ್​ ಸರ್ಕಲ್ ಬಳಿ ವ್ಯಾಪಾರಕ್ಕೆ ಮಹಾನಗರ ಪಾಲಿಕೆ ವ್ಯವಸ್ಥೆ ಮಾಡಿಕೊಟ್ಟಿದೆ. ಆದರೆ, ಅಲ್ಲಿನ ಅವ್ಯವಸ್ಥೆ ಕಂಡು ವ್ಯಾಪಾರಸ್ಥರು ಹೈರಾಣಾಗಿದ್ದಾರೆ.

ಯಾಕಂದರೆ, ಅಲ್ಲಿ ಪಾರ್ಕಿಂಗ್ ವ್ಯವಸ್ಥೆ, ಬಸ್ ಓಡಾಟ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲದೇ ಇರುವುದರಿಂದ ಹೊಸೂರ್​ ಬಳಿಯಿರುವ ಮಾರುಕಟ್ಟೆಗೆ ಬರಲು ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ವ್ಯಾಪಾರಸ್ಥರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಿಕೊಡಬೇಕೆಂದು ಜನತಾ ಬಜಾರ್ ಸಂಘದ ಅಧ್ಯಕ್ಷರು ಒತ್ತಾಯಿಸಿದ್ದಾರೆ.

ಓದಿ: ಕೊರೊನಾ ನೆಗೆಟಿವ್‌ ವರದಿಗೂ ಮುನ್ನವೇ ಆಸ್ಪತ್ರೆಯಿಂದ ರಮೇಶ್ ಜಾರಕಿಹೊಳಿ ಡಿಸ್ಚಾರ್ಜ್‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.