ಹುಬ್ಬಳ್ಳಿ: ಹೈದರಾಬಾದ್ ನಲ್ಲಿ ಪಶು ವೈದ್ಯೆ ಮೇಲೆ ಅತ್ಯಾಚಾರ ಮಾಡಿ ಸುಟ್ಟು ಹಾಕಿ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಯಾವೊಬ್ಬ ವಕೀಲರು ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿ ದುರ್ಗಾ ವಾಹಿನಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನಗರದ ಹೊಸ ಕೋರ್ಟ್ ಆವರಣದ ಎದುರು ಪ್ರತಿಭಟನೆ ನಡೆಸಿದ ದುರ್ಗಾ ವಾಹಿನಿ ಕಾರ್ಯಕರ್ತೆಯರು ಹಾಗೂ ಮಹಿಳಾ ವಕೀಲರು ಆರೋಪಿಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಲ್ಲಿಗೇರಿಸುವ ಕಠಿಣ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಆಗ್ರಹಿಸಿದರು.