ETV Bharat / city

ಇಂದು ಅಥವಾ ನಾಳೆಯೊಳಗೆ ಸರ್ಕಾರಿ ಶಾಲೆಗಳಿಗೆ ರಜೆ ನೀಡಬಹುದು.. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಇವತ್ತು ಇಲ್ಲವೆ ನಾಳೆಯೊಳಗೆ ರಾಜ್ಯಾದ್ಯಂತ ಶಾಲೆಗಳಿಗೆ ರಜೆ ನೀಡಬಹುದು ಎಂದು ಅವರು ಹೇಳಿದರು. ಕೋವಿಡ್ ಹಿನ್ನೆಲೆ ಬೆಂಗಳೂರಿನಲ್ಲಿ ರಜೆ ನೀಡಲಾಗಿದೆ..

i-have-spoken-with-the-chief-minister-about-giving-leave-to-schools
ಬಸವರಾಜ ಹೊರಟ್ಟಿ
author img

By

Published : Apr 2, 2021, 3:55 PM IST

ಹುಬ್ಬಳ್ಳಿ : ಕೋವಿಡ್ ಹಾಗೂ ತಾಪಮಾನದ ಹೆಚ್ಚಳದ ಹಿನ್ನೆಲೆ ಈಗಾಗಲೇ ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಇದನ್ನು ರಾಜ್ಯಾದ್ಯಂತ ಜಾರಿಗೆ ತರುವಂತೆ ಸಿಎಂ ಬಿ ಎಸ್ ಯಡಿಯೂರಪ್ಪನವರ ಜೊತೆಗೆ ಮಾತನಾಡಿದ್ದೇನೆ ಎಂದು ಪರಿಷತ್​​​​​​ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಶಾಲೆಗಳಿಗೆ ರಜೆ ನೀಡುವ ಕುರಿತು ಬಸವರಾಜ ಹೊರಟ್ಟಿ ಹೇಳಿಕೆ

ನಗರದಲ್ಲಿಂದು ಶಿಕ್ಷಕರ ಮನವಿ ಸ್ವೀಕರಿಸಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಮಾತ್ರವಲ್ಲದೇ ಉತ್ತರ ಕರ್ನಾಟಕದ ಭಾಗದಲ್ಲಿ ಕೂಡ ತಾಪಮಾನ ಹಾಗೂ ಕೋವಿಡ್ ಎರಡನೇ ಅಲೆಯು ಹೆಚ್ಚಾಗಿದೆ.

ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇನೆ. ಇವತ್ತು ಇಲ್ಲವೆ ನಾಳೆಯೊಳಗೆ ರಾಜ್ಯಾದ್ಯಂತ ಶಾಲೆಗಳಿಗೆ ರಜೆ ನೀಡಬಹುದು ಎಂದು ಅವರು ಹೇಳಿದರು. ಕೋವಿಡ್ ಹಿನ್ನೆಲೆ ಬೆಂಗಳೂರಿನಲ್ಲಿ ರಜೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೋವಿಡ್ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇದೆ. ಈ ಬಗ್ಗೆ ಮತ್ತೊಮ್ಮೆ ಸಚಿವರೊಂದಿಗೆ ಹಾಗೂ ಮುಖ್ಯಮಂತ್ರಿ ಜೊತೆಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.