ಧಾರವಾಡ: ವಿಜಯಪುರ ಜಿಲ್ಲಾಧಿಕಾರಿಯಾಗಿ ಸೋಮವಾರ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಇಂದು ಅಧಿಕಾರ ಸ್ವೀಕರಿಸಲು ಹೊರಟಿದ್ದ ವಿಜಯ ಮಹಾಂತೇಶ ದಾನಮ್ಮನವರ ಅವರ ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಐಎಎಸ್ ಅಧಿಕಾರಿ ಸಮೇತ ಐವರು ಗಾಯಗೊಂಡಿದ್ದಾರೆ. ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ರಾಷ್ಟ್ರಿಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ.
ಕಾರಿನಲ್ಲಿ ಸಂಚರಿಸುತ್ತಿದ್ದ ಮಹಾಂತೇಶ ದಾನಮ್ಮನವರ, ಅವರ ಪತ್ನಿ ಶ್ವೇತಾ ಹಾಗೂ ಮಕ್ಕಳಾದ ತನ್ವಿ, ವಿಹಾನ್ ಮತ್ತು ಚಾಲಕ ಪ್ರವೀಣ ಕುಮಾರಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆಯಲ್ಲಿ ಜಿ.ಪಂ. ಸಿಇಒ ದಾನಮ್ಮನವರ ನಿನ್ನೆ ವಿಜಯಪುರ ಡಿಸಿಯಾಗಿ ವರ್ಗಾವಣೆಗೊಂಡಿದ್ದರು. ಅಂತೆಯೇ ಇಂದು ಅಧಿಕಾರ ಸ್ವೀಕರಿಸಲು ಕುಟುಂಬ ಸಮೇತವಾಗಿ ವಿಜಯಪುರಕ್ಕೆ ಹೊರಟಿದ್ದರು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
(ಇದನ್ನೂ ಓದಿಆಡಳಿತಕ್ಕೆ ಮೇಜರ್ ಸರ್ಜರಿ: 17 ಐಎಎಸ್ ಅಧಿಕಾರಿಗಳ ವರ್ಗಾವಣೆ)