ಧಾರವಾಡ: ಆರೋಗ್ಯ ಇಲಾಖೆಯಿಂದ ಇದೀಗ ಮತ್ತೊಂದು ಎಡವಟ್ಟಾಗಿದೆ. ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಅವರ ಮನೆಯನ್ನು ಸೀಲ್‌ಡೌನ್ ಮಾಡಿದೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದ 32 ವರ್ಷದ ವ್ಯಕ್ತಿಗೆ ಜುಲೈ 25ರಂದು ಸೋಂಕು ದೃಢಪಟ್ಟಿತ್ತು. ಆತ ಆಗಸ್ಟ್ 3ರಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದರು.
ಇಂದು ಆರೋಗ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮನೆಯನ್ನು ಸೀಲ್‌ಡೌನ್ ಮಾಡಿದ್ದಾರೆ. ಅವರಿಗೆ ಧಾರವಾಡದ ಬಿಸಿಎಂ ಹಾಸ್ಟೆಲ್ನಲ್ಲಿ ಐಸೊಲೇಷನ್ನಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಅಧಿಕಾರಿಗಳ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.