ETV Bharat / city

ಇನ್ವೆಸ್ಟ್ ಕರ್ನಾಟಕ ಸಮಾವೇಶ: ಪೂರ್ವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ - ಇನ್​ವೆಸ್ಟ್​ ಕರ್ನಾಟಕ-ಹುಬ್ಬಳ್ಳಿ ಸಮಾವೇಶ ಪೂರ್ವ ಸಿದ್ಧತೆ

ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‍ನಲ್ಲಿ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ ಹಿನ್ನೆಲೆ ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರು ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಪೂರ್ವ ಸಿದ್ದತೆ ಬಗ್ಗೆ ಪರಿಶೀಲಿಸಿದರು.

invest-karnataka-conference-pre-prep-checked-dc
ಇನ್ವೆಸ್ಟ್ ಕರ್ನಾಟಕ ಸಮಾವೇಶ
author img

By

Published : Feb 10, 2020, 5:32 PM IST

ಧಾರವಾಡ: ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರು ಇನ್ವೆಸ್ಟ್​ ಕರ್ನಾಟಕ ಹುಬ್ಬಳ್ಳಿ ಸಮಾವೇಶದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

ಈಗಾಗಲೆ ಫೆಬ್ರವರಿ 14ರಂದು ಬೆಳಗ್ಗೆ 10-30ರಿಂದ ಸಂಜೆ 5-30ರವರೆಗೆ ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‍ನಲ್ಲಿ ನಡೆಯಲಿರುವ ಇನ್‍ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶಕ್ಕೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹಾವೇರಿ, ಉತ್ತರಕನ್ನಡ, ಗದಗ, ದಾವಣಗೆರೆ ಹಾಗೂ ಕೊಪ್ಪಳ ಜಿಲ್ಲೆಯ ಜಂಟಿ ನಿರ್ದೇಶಕರು, ಆಯಾ ಜಿಲ್ಲೆಯ ಕೈಗಾರಿಕಾ ಸಂಘಗಳು ಭಾಗವಹಿಸಲು ಆಮಂತ್ರಣ ನೀಡಿದ್ದಾರೆ.

ಸಮ್ಮೇಳನದಲ್ಲಿ ಧಾರವಾಡ ಜಿಲ್ಲೆಯಿಂದ 1000, ಬೆಳಗಾವಿ ಜಿಲ್ಲೆಯಿಂದ 200 ಮತ್ತು ಉಳಿದ ಪ್ರತಿ ಜಿಲ್ಲೆಗಳಿಂದ ನೂರಕ್ಕೂ ಹೆಚ್ಚು ಜನ ಉದ್ದಿಮೆದಾರರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾದಿಕಾರಿಗಳು ಮಾಹಿತಿ ನೀಡಿದರು.

ಸಭೆ ಪೂರ್ವದಲ್ಲಿ ಅವಳಿನಗರದ ಸೌಂದರ್ಯಿಕರಣ, ಜಾಹೀರಾತು ಫಲಕಗಳ ಅಳವಡಿಕೆ, ಪೊಲೀಸ್ ಬಂದೋಬಸ್ತ್, ವಾಹನಗಳ ಪಾರ್ಕಿಂಗ್ ಸ್ಥಳ ನಿಗದಿ ಇತ್ಯಾದಿಗಳ ಕುರಿತು ವಿವಿಧ ಇಲಾಖೆ ಅಧಿಕಾರಿಗಳಿಂದ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದುಕೊಂಡರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.