ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಠಿಣ ಲಾಕ್‌ಡೌನ್ ಹೇರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಹುಬ್ಬಳ್ಳಿ ಸರ್ಕ್ಯೂಟ್ ಹೌಸ್‌ನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ವಾರಾಂತ್ಯದ ಲಾಕ್‌ಡೌನ್ ಮಾದರಿಯಲ್ಲಿ ವಾರದ 5 ದಿನ ಕಠಿಣ ಲಾಕ್‌ಡೌನ್ ಮಾಡಿ ಗುರುವಾರ ಮತ್ತು ಶುಕ್ರವಾರ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡುವ ಕುರಿತು ಸಚಿವರು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಬುರಾಮ, ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸಭೆಯಲ್ಲಿ ಭಾಗವಹಿಸಿದ್ದರು.