ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ನೀಡಿದ್ದು ಇಷ್ಟವಿರಲಿಲ್ಲ. ಆದ್ರು ಸಹ ಒಪ್ಪಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದ್ರೆ ಶೆಟ್ಟರ್ ಅವರು ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ವಿವಿಧ ನಿಗಮ ಮಂಡಳಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
![Jagdish Shetter](https://etvbharatimages.akamaized.net/etvbharat/prod-images/kn-hbl-02-industry-meeting-7208089_29082019174012_2908f_1567080612_830.jpg)
ಹುಬ್ಬಳ್ಳಿ ಐಟಿ ಪಾರ್ಕಿನ ಕೆಯುಐಎಫ್ ಡಿಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವಳಿನಗರದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ದಿ, ಹುಬ್ಬಳ್ಳಿ- ಧಾರವಾಡ ಅಭಿವೃದ್ದಿಗಾಗಿ ಬೃಹತ್ ಹೊಸ ಕೈಗಾರಿಕೆಗಳ ಸ್ಥಾಪನೆ ಕುರಿತಂತೆ ಗಂಭೀರವಾದ ಚರ್ಚೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಅವರು, ಕೈಗಾರಿಗಳ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನು ಸಭೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಜಿ.ಪಂ ಸಿಇಒ ಡಾ.ಬಿ.ಸಿ ಸತೀಶ್, ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಉಪ ವಿಭಾಗಾಧಿಕಾರಿ ಮಹ್ಮದ್ ಜುಬೇರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪಿ.ನಾಗೇಶ್, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅಭಿವೃದ್ಧಿ ಅಧಿಕಾರಿ ಮನೋಹರ ವಡ್ಡರ್, ಜಿಲ್ಲೆಯ ಕೈಗಾರಿಕಾ ರಂಗದ ಅಧಿಕಾರಿಗಳು ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.