ಹುಬ್ಬಳ್ಳಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನೆ ವಿಚಾರದಲ್ಲಿ ಕನ್ನಡಿಗರಿಗೆ ಅವಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜೈ ಭೀಮಾ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟಿಸಲಾಯಿತು.
ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿದ ಕಾರ್ಯಕರ್ತರು, ರಾಯಣ್ಣನ ಪುತ್ಥಳಿಯನ್ನು ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಕಾರಣಕ್ಕೆ ಕೆಲ ಮರಾಠಿಗ ದುಷ್ಟಶಕ್ತಿಗಳು ಕನ್ನಡಿಗರ ಮೇಲೆ ಕಲ್ಲು ಹಾಗೂ ಚಪ್ಪಲಿ ಎಸೆಯುವಂತ ಕೆಲಸ ಮಾಡಿರುವುದು ಖಂಡನೀಯ.
ಈ ಗಲಭೆಯಲ್ಲಿ ಭಾಗಿಯಾಗಿರುವವರು ಯಾರೇ ಆದರೂ ಕೂಡ ಅವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.