ETV Bharat / city

ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಕರ್ನಾಟಕ ರಾಷ್ಟ್ರ ಸಮಿತಿ ಸ್ಪರ್ಧೆ: ರವಿಕೃಷ್ಣ ರೆಡ್ಡಿ - hubli news

ಕರ್ನಾಟಕ ರಾಷ್ಟ್ರ ಸಮಿತಿಯು ರಾಜ್ಯದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಸ್ಪರ್ಧಿಸಲಿದ್ದು, ಅದಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ತಿಳಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ
author img

By

Published : Oct 24, 2019, 2:13 PM IST

ಹುಬ್ಬಳ್ಳಿ: ಕರ್ನಾಟಕ ರಾಷ್ಟ್ರ ಸಮಿತಿಯು ರಾಜ್ಯದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಸ್ಪರ್ಧಿಸಲಿದ್ದು, ಅದಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಹೇಳಿದ್ದಾರೆ.

ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಕರ್ನಾಟಕ ರಾಷ್ಟ್ರ ಸಮಿತಿ ಸ್ಪರ್ಧಿಸಲಿದೆ: ರವಿಕೃಷ್ಣ ರೆಡ್ಡಿ

ನಗರದಲ್ಲಿಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ ಸ್ಥಾಪನೆಗೊಂಡ ಪಕ್ಷ ಕರ್ನಾಟಕ ರಾಷ್ಟ್ರ ಸಮಿತಿ. ಪಕ್ಷ ಸ್ಥಾಪನೆಗೊಂಡು ಕೆಲವೇ ಕೆಲವು ತಿಂಗಳು ಆಗಿದ್ದರೂ ಸಮಾಜಪರ ಹೋರಾಟದ ಮೂಲಕ‌ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಪಕ್ಷವನ್ನು ರಾಜ್ಯದಲ್ಲಿ ವಿಸ್ತರಿಸುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಘೋಷಿಸಿರುವ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಈಗಾಗಲೇ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಿಸಲಾಗಿದೆ ಎಂದು ಹೇಳಿದರು.

ಮಹಾಲಕ್ಷ್ಮೀ ಲೇಔಟ್, ಕೆ.ಆರ್. ಪುರ, ಹಿರೇಕೆರೂರು, ವಿಜಯನಗರ ಮತ್ತು ಕಾಗವಾಡ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ರಾಜ್ಯ ಚುನಾವಣೆ ಆಯೋಗವು ಘೋಷಿಸಿರುವ 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಲಾಗುತ್ತಿದ್ದು, ಅದರಂತೆ ಹು-ಧಾ ಮಹಾನಗರ ಪಾಲಿಕೆ ಸೇರಿದಂತೆ ದಾವಣಗೆರೆ ಹಾಗೂ‌ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಇನ್ನು, ನೆರೆ ಪರಿಹಾರದಲ್ಲಿ ರಾಜಕೀಯ ಪಕ್ಷಗಳು ತಾರತಮ್ಯ ಮಾಡುತ್ತಿವೆ ಎಂದು ಆರೋಪಿಸಿದ ರವಿಕೃಷ್ಣ ರೆಡ್ಡಿ, ‌ಇದರಂದ ನಿರಾಶ್ರಿತರು‌ ಕಂಗಾಲಾಗಿದ್ದು, ಜೆಸಿಬಿ ಪಕ್ಷಗಳಿಗೆ ಜನರು ಪಾಠ ಕಲಿಸಬೇಕು ಎಂದರು.

Intro:ಹುಬ್ಬಳ್ಳಿ -02

ಕರ್ನಾಟಕ ರಾಷ್ಟ್ರ ಸಮಿತಿಯು ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಸ್ಪರ್ಧಿಸಲಿದ್ದು, ಅದಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಹೇಳಿದರು‌.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಚ್ಛ, ಪ್ರಮಾಣಿಕ, ಜನಪರ ರಾಜಕಾರಣಕ್ಕಾಗಿ ಸ್ಥಾಪನೆಗೊಂಡ ಪಕ್ಷ ಕರ್ನಾಟಕ ರಾಷ್ಟ್ರ ಸಮಿತಿ. ಪಕ್ಷ ಸ್ಥಾಪನೆಗೊಂಡು ಕೇಲವೇ ಕೇಲವು ತಿಂಗಳು ಆಗಿದ್ದರು. ಸಮಾಜಪರ ಹೋರಾಟ ಮಾಡುವ ಮೂಲಕ‌ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದು, ಪಕ್ಷವನ್ನು ರಾಜ್ಯದಲ್ಲಿ ವಿಸ್ತರಿಸುವ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಘೋಷಿಸಿರುವ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದು, ಪಕ್ಷವು ಈಗಾಗಲೇ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸಿದ್ದು, ಮಹಾಲಕ್ಷ್ಮೀ ಲೇಔಟ್, ಕೆ.ಆರ್.ಪುರ, ಹಿರೇಕೆರೂರ, ವಿಜಯನಗರ ಮತ್ತು ಕಾಗವಾಡ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಉಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಮುಂದಿನ ದಿನಗಳಲ್ಲಿ ಇನ್ನೊಂದು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.
ರಾಜ್ಯ ಚುನಾವಣೆ ಆಯೋಗವು ಘೋಷಿಸಿರುವ 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಲಾಗುತ್ತಿದ್ದು, ಅದರಂತೆ ಹು-ಧಾ ಮಹಾನಗರ ಪಾಲಿಕೆ ಸೇರಿದಂತೆ ದಾವಣಗೆರೆ ಹಾಗೂ‌ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಲಾಗುವುದು ಎಂದರು.
ನೆರೆ ಪರಿಹಾರದಲ್ಲಿ ರಾಜಕೀಯ ಪಕ್ಷಗಳು ತಾರತಮ್ಯ ಮಾಡುತ್ತಿವೆ. ‌ಇದರಂದ ನಿರಾಶ್ರಿತರು‌ ಕಂಗಾಲಾಗಿದ್ದು, ಜೆಸಿಬಿ ಪಕ್ಷಗಳಿಗೆ ಜನರು ಪಾಠ ಕಲಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಧಾರವಾಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮಠದ, ಹು-ಧಾ ಮಹಾನಗರದ ಅಧ್ಯಕ್ಷ ಈರಪ್ಪ ಎಮ್ಮಿ, ಪ್ರದಾನ ಕಾರ್ಯದರ್ಶಿ ದೀಪಕ ಸಿಮಾನ, ಹು-ಧಾ ಗೌರವ ಅಧ್ಯಕ್ಷ ಪ್ರಭುಲಿಂಗ ನಾಚೇಕರ, ಧಾರವಾಡ ಜಿಲ್ಲಾ ಅಧ್ಯಕ್ಷ ಮಂಜುನಾಥ ಜಕ್ಕಪ್ಪನ್ನವರ, ಹು-ಧಾ ಗ್ರಾಮೀಣ ಕಾರ್ಯಾಧ್ಯಕ್ಷ ಸೈದಾಪೂರ, ಹು-ಧಾ ಘಟಕದ ಪ್ರದಾನ ಕಾರ್ಯದರ್ಶಿ ಸೋಮಶೇಖರ್ ಯಾದವ, ಹುಬ್ಬಳ್ಳಿ ತಾಲೂಕು ಅಧ್ಯಕ್ಷ ಗುರುನಾಥ ಶಿವರಾಜ ಸೇರಿದಂತೆ ಮುಂತಾದವರು ಇದ್ದರು.

ಬೈಟ್ - ರವಿಕೃಷ್ಣ ರೆಡ್ಡಿ, ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯಾಧ್ಯಕ್ಷ Body:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.