ಹುಬ್ಬಳ್ಳಿ: ಹು - ಧಾ ಪೊಲೀಸ್ ಕಮೀಷನರೇಟ್ನ ಕೇಶ್ವಾಪೂರ ಪೊಲೀಸ್ ಠಾಣೆಗೆ ಕಾನೂನು ಮತ್ತು ಸುವ್ಯವಸ್ಥೆಯ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು. ಹಿನ್ನೆಲೆಯಲ್ಲಿ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.
ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅಲೋಕ್ ಕುಮಾರ್, ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಉಚ್ಚ ನ್ಯಾಯಾಲಯದ ಆದೇಶದ ಮೇಲೆ 11 ಪ್ರಕರಣಕ್ಕೆ ತಡೆಯಾಜ್ಞೆ ಬಂದಿದೆ. ಉಳಿದ ಪ್ರಕರಣ ತನಿಖೆಯ ಹಂತದಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಭದ್ರ ಪಡಿಸಲು ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಪ್ರಮೋದ್ ಮುತಾಲಿಕ್ ಹೇಳಿಕೆ ಹಾಗೂ ಧ್ವನಿವರ್ಧಕಗಳ ಕುರಿತಾದ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮುತಾಲಿಕ್ ಹೇಳಿಕೆ ಬಗ್ಗೆ ಪರಿಶೀಲನೆ ನಡೆಸಿ ಯಾವುದರ ಬಗ್ಗೆ ಹೀಗೆ ಮಾತನಾಡಿದ್ದಾರೆ ಎಂದು ಕೂಲಂಕಷವಾಗಿ ಪರಿಶೀಲನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ಧ್ವನಿವರ್ಧಕಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಏನು ಕ್ರಮಗಳನ್ನು ಕೈಗೊಳ್ಳಬೇಕು ಅದನ್ನು ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ: ಚಕ್ರತೀರ್ಥರನ್ನು ಸಮಿತಿಯಿಂದ ವಜಾಗೊಳಿಸಿ: ಪಾಂಡೋಮಟ್ಟಿ ಶ್ರೀ ಗುರುಬಸವ ಸ್ವಾಮೀಜಿ