ETV Bharat / city

ನ್ಯಾಯಕ್ಕಾಗಿ ಭಾವಿ ವಕೀಲರ ಹೋರಾಟ : ಸುವರ್ಣಸೌಧದ ಎದುರು ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಎನ್‌ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನವನಗರದ ಕಾನೂನು ವಿಶ್ವ ವಿದ್ಯಾಲಯದ ಎದುರು ಹಗಲಿರುಳು‌ ಧರಣಿ ನಡೆಸುತ್ತಿದ್ದು, ಈಗ ಮುಂದುವರಿದ ಭಾಗವಾಗಿ ಬೆಳಗಾವಿ ಸುವರ್ಣ ಸೌಧದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದ್ದಾರೆ.

law-student-protest-in-suvarna-soudha
ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ
author img

By

Published : Dec 14, 2021, 11:16 AM IST

ಹುಬ್ಬಳ್ಳಿ/ಬೆಳಗಾವಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾನೂನು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈಗ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ ಬೆಳಗಾವಿ ಸುವರ್ಣ ಸೌಧವನ್ನು ತಲುಪಿದೆ.

ಮೂರು ಮತ್ತು ಐದನೇ ಸೆಮಿಸ್ಟರ್ ಕಾನೂನು ತರಗತಿ ಆರಂಭಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ. ಎನ್‌ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನವನಗರದ ಕಾನೂನು ವಿಶ್ವ ವಿದ್ಯಾಲಯದ ಎದುರು ಹಗಲಿರುಳು‌ ಧರಣಿ ನಡೆಸುತ್ತಿದ್ದರು. ಈಗ ಮುಂದುವರಿದ ಭಾಗವಾಗಿ ಬೆಳಗಾವಿ ಸುವರ್ಣ ಸೌಧದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ.

: ಸುವರ್ಣಸೌಧದಲ್ಲಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುವರ್ಣ ಸೌಧದ ಎದುರಿನಲ್ಲಿ ಪ್ರತಿಭಟನೆಗೆ ವಿದ್ಯಾರ್ಥಿಗಳು ಮುಂದಾಗಿದ್ದು, ಮೊದಲ ಮತ್ತು ಎರಡನೇ ವರ್ಷದ ಕಾನೂನು ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಆಕ್ಟೋಬರ್‌ನಲ್ಲಿ ಮುಗಿದು, ಈ ತಿಂಗಳಲ್ಲಿ ಮುಂದಿನ ತರಗತಿಗಳು ಆರಂಭ ಆಗಬೇಕಿತ್ತು. ಆದರೆ, ವಿಶ್ವವಿದ್ಯಾಲಯ ಪರೀಕ್ಷೆ ನಡೆಸದೆ, ಮುಂದಿನ ಸೆಮಿಸ್ಟರ್ ತರಗತಿಯನ್ನೂ ನಡೆಸದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು. ಯಾವುದೇ ಕಾರಣಕ್ಕೂ ಭೌತಿಕವಾಗಿ ಪರೀಕ್ಷೆ ನಡೆಸಬಾರದು. ಆನ್ಲೈನ್ ಅಥವಾ ಅಸೈನ್ಮೆಂಟ್ ಮಾದರಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.