ಹುಬ್ಬಳ್ಳಿ: ಕರ್ತವ್ಯ ನಿರತ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ವಕೀಲರೊಬ್ಬರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನವನಗರದಲ್ಲಿ ನಡೆದಿದೆ.
ನವನಗರ ಠಾಣೆಯ ಇನ್ಸ್ಪೆಕ್ಟರ್ ಪ್ರಭುಸೂರಿನ ಮತ್ತು ವಕೀಲ ವಿನೋದ್ ಪಾಟೀಲ್ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ವಕೀಲ ವಿನೋದ್ ಪಾಟೀಲ್ ಮತ್ತು ರೌಡಿಶೀಟರ್ ಪ್ರವೀಣ್ ಪೂಜಾರಿ, ಮಲ್ಲಯ್ಯ ಹಿರೇಮಠ ನಡುವೆ ಜಗಳವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಇನ್ಸ್ಪೆಕ್ಟರ್ ಆಗಮಿಸಿದ್ದು, ಬೀದಿಯಲ್ಲಿ ಜಗಳವಾಡಬೇಡಿ ಠಾಣೆಗೆ ಬನ್ನಿ ಎಂದು ಹೇಳಿದ್ದಾರೆ.
ಆಗ ವಿನೋದ ಪಾಟೀಲ್ ಮತ್ತು ಇನ್ಸ್ಪೆಕ್ಟರ್ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ನವನಗರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.