ಹುಬ್ಬಳ್ಳಿ: ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ್ದ ಅಪರಾಧಿಗಳಿಗೆ 5ನೇ ಮತ್ತು ಅಪರ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್. ಗಂಗಾಧರ, ಕುಸುಗಲ್ ನಿವಾಸಿಯಾದ ಅಪರಾಧಿ ಇಸ್ಮಾಯಿಲ್ ಸಾಬ ಶರೀಫ್ ಸಾಬ ಶಫಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ.
ಅಪರಾಧಿಯು ರಹಿಮಾನ್ ಸಾಬನ ಹೆಂಡತಿ ಜೊತೆಗೆ ವಿವಾಹೇತರ ಸಂಬಂಧ ಹೊಂದಿದ್ದನು. ಇದನ್ನು ಪ್ರಶ್ನೆ ಮಾಡಿದಕ್ಕೆ ಇಸ್ಮಾಯಿಲ್ ಸಾಬ ತನ್ನ ಸ್ನೇಹಿತ ಫಕ್ಕಿರಪ್ಪ ಪ್ರಕಾಶ ಗುಡ್ಡನ್ನವರ ಜೊತೆಗೂಡಿ ರಹಿಮಾನ್ ಸಾಬನನ್ನು ಕೊಲೆ ಮಾಡಿದ್ದನು.
ಈ ಇಬ್ಬರು ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 50 ಸಾವಿರ ದಂಡ ವಿಧಿಸಿದೆ. ಸರ್ಕಾರದ ಪರ ಅಭಿಯೋಜಕರಾಗಿ ಸುಮಿತ್ರಾ ಎಂ ಅಂಚಟಗೇರಿ ವಾದ ಮಂಡಿಸಿದ್ದರು. ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಪ್ರಕರಣದ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ: ಕಾಲುವೆ ಜಾಗ ಒತ್ತುವರಿ ಮಾಡಿ ಮನೆ ನಿರ್ಮಾಣ ಆರೋಪ: ಸಚಿವ ಆನಂದ ಸಿಂಗ್ ವಿರುದ್ಧ ದೂರು