ಧಾರವಾಡ: ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಮುಂಗಾರು ಬಿತ್ತನೆ ಚುರುಕು ಪಡೆದುಕೊಂಡಿರುವ ಹಿನ್ನೆಲೆ ಬಿತ್ತನೆ ಬೀಜಕ್ಕೆ ರೈತರು ಮುಗಿಬಿದ್ದಿದ್ದಾರೆ.
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಎದುರು ನೂರಾರು ರೈತರ ಜಮಾವಣೆಗೊಂಡಿದ್ದಾರೆ. ಅಲ್ಲಿ ಯಾರೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಂಡಿರಲಿಲ್ಲ. ಅಲ್ಲದೇ, ಮಾಸ್ಕ್ ಕೂಡ ಧರಿಸಿರಲಿಲ್ಲ.
ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೂ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವರು ಕೂಡಾ ಸಾಮಾಜಿಕ ಅಂತರ ಪಾಲಿಸದೇ, ಮಾಸ್ಕ್ ಧರಿಸದೇ ಕಾರ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.