ಹುಬ್ಬಳ್ಳಿ: ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿಯೇ ಹೊರತು ಕಡಿಮೆಯಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಅದರಲ್ಲೂ ಲಾಕ್ಡೌನ್ ಸಡಿಲಿಕೆ ಮಾಡಿದ ನಂತರ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಲೇ ಇವೆ.
ಬೇರೆ ರಾಜ್ಯದಿಂದ ಬರುತ್ತಿರುವವರಿಂದಲೇ ಕೊರೊನಾ ಹೆಚ್ಚು ಹರಡುತ್ತಿದೆ. ಈ ನಡುವೆ ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ಹೊರಟಿದ್ದ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಲಾರಿಯನ್ನು ಧಾರವಾಡ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಹಾಗೂ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ತಡೆದಿದ್ದಾರೆ.
ಹುಬ್ಬಳ್ಳಿ ಸಮೀಪದ ವರೂರ-ಅಗಡಿ ಬಳಿ ಪೊಲೀಸರ ಕಣ್ತಪ್ಪಿಸಿ ಲಾರಿಯಲ್ಲಿ ನೂರಾರು ಮಂದಿ ಮಹಾರಾಷ್ಟ್ರಕ್ಕೆ ಹೊರಟ್ಟಿದ್ದರು. ಖಚಿತ ಮಾಹಿತಿ ಮೇಲೆ ಲಾರಿಯನ್ನು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಎಲ್ಲರನ್ನೂ ವೈದ್ಯಕೀಯ ಪರೀಕ್ಷೆ ನಡೆಸಿ ಬೇರೆ ವಾಹನಗಳ ಮೂಲಕ ಅವರವರ ರಾಜ್ಯಕ್ಕೆ ಕಳಿಸಿಕೊಡಲು ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ವ್ಯವಸ್ಥೆ ಮಾಡಿದ್ದಾರೆ.